KSEDCL ನೇಮಕಾತಿ 2023 : ಸಹಾಯಕ ಹುದ್ದೆಗಳಿಗೆ ಉದ್ಯೋಗಾವಕಾಶ, ವೇತನ 97100 ರೂ.

ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ (KSEDCL Recruitment 2023) ಅಧಿಕೃತ ಅಧಿಸೂಚನೆಯ ಏಪ್ರಿಲ್ 2023 ರ ಮೂಲಕ ಸಹಾಯಕ, ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿಲಿಕಾನ್‌ ಸಿಟಿಯಲ್ಲಿ ಸರಕಾರ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್‌ಮೆಂಟ್ ಕಾರ್ಪೊರೇಶನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹೆಚ್ಚುವರಿ ಗುಂಪು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ಗುಂಪಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಕುರಿತು ದಿನಾಂಕ ಮಾರ್ಚ್‌ 24, 2023 ರಂದು ಅಧಿಸೂಚನೆಯನ್ನು ಹೊರಡಿಸಿದೆ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಲಾಗಿದೆ. ಏಪ್ರಿಲ್‌ 17, 2023 ರಂದು ಪ್ರಾರಂಭಿಸಲಾಗುವುದು, ಆದರೆ ತಾಂತ್ರಿಕ ಸಮಸ್ಯೆಗಳಿಂದಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದೂಡಲಾಗಿದೆ. ಅರ್ಜಿಯ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.

KSEDCL ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ನಿಯಮಿತ (KSEDCL)
ಹುದ್ದೆಗಳ ಸಂಖ್ಯೆ : 26 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಸಹಾಯಕ, ಸಹಾಯಕ ವ್ಯವಸ್ಥಾಪಕ
ವೇತನ : ರೂ.30350-97100/- ಪ್ರತಿ ತಿಂಗಳು

KSEDCL ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ಗುಂಪು-ಬಿ : 4 ಹುದ್ದೆಗಳು
  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕವಲ್ಲದ) – ಗುಂಪು-ಬಿ : 2 ಹುದ್ದೆಗಳು
  • ಖಾಸಗಿ ಕಾರ್ಯದರ್ಶಿ – ಗುಂಪು-ಸಿ : 1 ಹುದ್ದೆ
  • ಹಿರಿಯ ಸಹಾಯಕ (ತಾಂತ್ರಿಕ) – ಗುಂಪು-ಸಿ : 4 ಹುದ್ದೆಗಳು
  • ಹಿರಿಯ ಸಹಾಯಕ (ತಾಂತ್ರಿಕೇತರ) – ಗುಂಪು-C : 3 ಹುದ್ದೆಗಳು
  • ಸಹಾಯಕ (ತಾಂತ್ರಿಕ) – ಗುಂಪು-ಸಿ : 6 ಹುದ್ದೆಗಳು
  • ಸಹಾಯಕ (ತಾಂತ್ರಿಕವಲ್ಲದ) – ಗುಂಪು-ಸಿ : 6 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಿಂದ KSEDCL ನಿಯಮಗಳ ಪ್ರಕಾರ, ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯಸ್ಸಿನ ಮಿತಿ ವಿವರ :
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ವಯೋಮತಿಯನ್ನು KSEDCL ನಿಯಮಗಳ ಪ್ರಕಾರ ಹೊಂದಿರಬೇಕು.

ಅರ್ಜಿ ಶುಲ್ಕ:
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸಂಬಂಧಪಟ್ಟ ಅರ್ಜಿ ಶುಲ್ಕವನ್ನು ಅಧಿಕೃತ ಅಧಿಸೂಚನೆಯನ್ನು ನೋಡಿ ತಿಳಿದುಕೊಳ್ಳಬೇಕಾಗಿದೆ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

KSEDCL ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ (ತಿಂಗಳಿಗೆ)ದ ವಿವರ :

  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) – ಗುಂಪು-ಬಿ : ರೂ.52650-97100/-
  • ಸಹಾಯಕ ವ್ಯವಸ್ಥಾಪಕರು (ತಾಂತ್ರಿಕವಲ್ಲದ) – ಗುಂಪು-ಬಿ : ರೂ.52650-97100/-
  • ಖಾಸಗಿ ಕಾರ್ಯದರ್ಶಿ – ಗುಂಪು-ಸಿ : ರೂ.40900-78200/-
  • ಹಿರಿಯ ಸಹಾಯಕ (ತಾಂತ್ರಿಕ) – ಗುಂಪು-ಸಿ : ರೂ.33450-62600/-
  • ಹಿರಿಯ ಸಹಾಯಕ (ತಾಂತ್ರಿಕೇತರ) – ಗುಂಪು-ಸಿ : ರೂ.33450-62600/-
  • ಸಹಾಯಕ (ತಾಂತ್ರಿಕ) – ಗುಂಪು-ಸಿ : ರೂ.30350-58250/-
  • ಸಹಾಯಕ (ತಾಂತ್ರಿಕವಲ್ಲದ) – ಗುಂಪು-ಸಿ : ರೂ.30350-58250/-

ಇದನ್ನೂ ಓದಿ : UPSC CAPF AC 2023 : ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಶೀಘ್ರದಲ್ಲೇ
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ

KSEDCL Recruitment 2023 : Vacancy for Assistant Posts, Salary Rs 97100

Comments are closed.