ಸೋಮವಾರ, ಏಪ್ರಿಲ್ 28, 2025
Homejob NewsKSFC ನೇಮಕಾತಿ 2023 : ವಿವಿಧ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

KSFC ನೇಮಕಾತಿ 2023 : ವಿವಿಧ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

- Advertisement -

ಕರ್ನಾಟಕ ರಾಜ್ಯ ಹಣಕಾಸು ನಿಗಮವು (KSFC Recruitment 2023) ಫೆಬ್ರವರಿ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯುಟಿ ಮ್ಯಾನೇಜರ್ (ತಾಂತ್ರಿಕ), ಡೆಪ್ಯುಟಿ ಮ್ಯಾನೇಜರ್ (ಕಾನೂನು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಕರ್ನಾಟಕ ರಾಜ್ಯ ಹಣಕಾಸು ನಿಗಮ (KSFC) ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಹಣಕಾಸು ನಿಗಮ (KSFC)
ಹುದ್ದೆಗಳ ಸಂಖ್ಯೆ : 41 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಉಪ ವ್ಯವಸ್ಥಾಪಕ (ತಾಂತ್ರಿಕ), ಉಪ ವ್ಯವಸ್ಥಾಪಕ (ಕಾನೂನು)
ವೇತನ : ರೂ. 52,650 – 97,100/- ಪ್ರತಿ ತಿಂಗಳು

ಕರ್ನಾಟಕ ರಾಜ್ಯ ಹಣಕಾಸು ನಿಗಮ (KSFC)ದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಉಪ ವ್ಯವಸ್ಥಾಪಕರು (ತಾಂತ್ರಿಕ) : 11 ಹುದ್ದೆಗಳು
ಉಪ ವ್ಯವಸ್ಥಾಪಕರು (ಕಾನೂನು) : 18 ಹುದ್ದೆಗಳು
ಉಪ ವ್ಯವಸ್ಥಾಪಕರು (ಹಣಕಾಸು ಮತ್ತು ಖಾತೆಗಳು) : 12 ಹುದ್ದೆಗಳು

ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ಹಣಕಾಸು ನಿಗಮ (KSFC)ದ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ACA/ ICWA/ ಪದವಿ, LLB, MBA/ M.Com/ CFA/ PGDMA ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಕರ್ನಾಟಕ ರಾಜ್ಯ ಹಣಕಾಸು ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 25 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 40 ವರ್ಷ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು : 3 ವರ್ಷಗಳು
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು : 5 ವರ್ಷಗಳು
ಪಿಡಬ್ಲ್ಯೂಡಿ ಅಭ್ಯರ್ಥಿಗಳು : 10 ವರ್ಷಗಳು

ಕರ್ನಾಟಕ ರಾಜ್ಯ ಹಣಕಾಸು ನಿಗಮದ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ರಾಜ್ಯ ಹಣಕಾಸು ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ವ್ಯವಸ್ಥಾಪಕ ನಿರ್ದೇಶಕರು, KSFC ಪ್ರಧಾನ ಕಛೇರಿ, KSFC ಭವನ, ನಂ.1/1, ತಿಮ್ಮಯ್ಯ ರಸ್ತೆ, ಬೆಂಗಳೂರು 560052 ಗೆ ಮಾರ್ಚ್‌ 18, 2023 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ 2023 : ತಾಂತ್ರಿಕ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಇದನ್ನೂ ಓದಿ : IDBI ಬ್ಯಾಂಕ್ ನೇಮಕಾತಿ 2023 : ವಿವಿಧ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : PDO Recruitment 2023 :‌ ಪಿಡಿಒ ಹುದ್ದೆಗಳ ಭರ್ತಿಗೆ ಗ್ರೀನ್‌ ಸಿಗ್ನಲ್ ನೀಡಿದ ರಾಜ್ಯ ಸರಕಾರ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13 ಫೆಬ್ರವರಿ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18 ಮಾರ್ಚ್ 2023

KSFC Recruitment 2023 : Application Invitation for Various Deputy Manager Posts

RELATED ARTICLES

Most Popular