KSP Recruitment 2022 : 1591 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆ (KSP Recruitment 2022) ಸೆಪ್ಟೆಂಬರ್‌ 2022ರ ಮೂಲಕ ಅಧಿಕೃತವಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ರಾಜ್ಯ ಪೊಲೀಸ್‌ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಖಾಲಿರುವ 1591 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿಯನ್ನು ಮಾಡಿಕೊಳ್ಳುತ್ತಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್‌ 21, 2022ರ ಒಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

KSP Recruitment 2022 : KSP ಹುದ್ದೆಗಳ ವಿವರ:

  • ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಪೊಲೀಸ್ (KSP)
  • ಪೋಸ್ಟ್‌ಗಳ ಸಂಖ್ಯೆ: 1137+454=1591
  • ಉದ್ಯೋಗ ಸ್ಥಳ: ಕರ್ನಾಟಕ
  • ಹುದ್ದೆಯ ಹೆಸರು: ಸಿವಿಲ್ ಪೊಲೀಸ್ ಕಾನ್ಸ್ಟೇಬಲ್
  • ವೇತನ: ರೂ.23500-47650/- ಪ್ರತಿ ತಿಂಗಳು

KSP ನೇಮಕಾತಿ 2022 ಅರ್ಹತೆ ವಿವರಗಳು:

ವಿದ್ಯಾರ್ಹತೆ ವಿವರ :
ಈ ಹುದ್ದೆಯ ನೇಮಕಾತಿಯಲ್ಲಿ ಅಭ್ಯರ್ಥಿಗಳನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಈ ಹುದ್ದೆಯ ನೇಮಕಾತಿಯಲ್ಲಿ, ಅರ್ಹ ಅಭ್ಯರ್ಥಿಯು ಕನಿಷ್ಠ 19 ವರ್ಷದಿಂದ ಗರಿಷ್ಠ 25 ವರ್ಷ ಆಗಿರಬೇಕು.

ವಯೋಮಿತಿ ಸಡಿಲಿಕೆ :

  • SC/ST/OBC ಅಭ್ಯರ್ಥಿಗಳಿಗೆ : 02 ವರ್ಷಗಳು
  • ಬುಡಕಟ್ಟು ಜನಾಂಗದಲ್ಲಿ ವಾಸಿಸುವ ಅಭ್ಯರ್ಥಿಗಳಿಗೆ : 05 ವರ್ಷಗಳು
  • ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ : 06 ವರ್ಷಗಳು
  • ಇನ್-ಸರ್ವಿಸ್ (SC/ST/OBC) ಅಭ್ಯರ್ಥಿಗಳು: 08 ವರ್ಷಗಳು

ಅರ್ಜಿ ಶುಲ್ಕ:
SC/ST/ಪ್ರವರ್ಗ-I ಅಭ್ಯರ್ಥಿಗಳು : ರೂ.200/-
ಸಾಮಾನ್ಯ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು : ರೂ.400/-
ಪಾವತಿ ವಿಧಾನ: ಆನ್‌ಲೈನ್ ಅಥವಾ ಚಲನ್

ಆಯ್ಕೆ ಪ್ರಕ್ರಿಯೆ:
ಹುದ್ದೆಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

KSP ನೇಮಕಾತಿ 2022 ಕ್ಕೆ ಅರ್ಜಿ ಸಲ್ಲಿಕೆಯ ವಿಧಾನ :
ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಗುರುತಿನ ಚೀಟಿ, ಶೈಕ್ಷಣಿಕ ಅರ್ಹತೆ, ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ ಇನ್ನಿತರ ದಾಖಲೆ)ಅಧಿಕೃತ ವೆಬ್‌ಸೈಟ್‌ ಆದ ksp.karnataka.gov.inನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಇದನ್ನೂ ಓದಿ : KPSC Recruitment 2022 : KPSC ನೇಮಕಾತಿ 2022 : ಲೇಬರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : India Post Recruitment 2022 : ಭಾರತ ಪೋಸ್ಟ್ ನೇಮಕಾತಿ 2022: ನುರಿತ ಕುಶಲಕರ್ಮಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : High Court Recruitment 2022 : ಹೈಕೋರ್ಟ್‌ ನ್ಯಾಯಾಧೀಶರ ಹುದ್ದೆಗೆ ಅರ್ಜಿ ಆಹ್ವಾ

ಗಮನಿಸಬೇಕಾದ ಮುಖ್ಯ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20-10-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-11-2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 23-11-2022

KSP Recruitment 2022 :1591 Application Invitation for Civil Police Constable Posts

Comments are closed.