KSP Recruitment:ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ 3484 ಹುದ್ದೆಗಳಿಗೆ ಅರ್ಜಿ ಆಹ್ವಾನ

KSP Recruitment : ಕರ್ನಾಟಕ ರಾಜ್ಯ ಪೊಲೀಸ್ (KSP )ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಪೊಲೀಸ್ ಅಧಿಕಾರಿ ಹುದ್ದೆಯಲ್ಲಿ ಕೆಲಸ ಮಾಡಲು ಇಚ್ಚಿಸುವವರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್ 30, 2022 ಮೊದಲು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

KSP Recruitment : ಹುದ್ದೆಯ ಸಂಪೂರ್ಣ ವಿವರ

ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP )
ಹುದ್ದೆಯ ಹೆಸರು :ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್
ಹುದ್ದೆಯ ಸಂಖ್ಯೆ:3484
ಉದ್ಯೋಗ ಸ್ಥಳ : ಕರ್ನಾಟಕ

ಹುದ್ದೆಯ ಸಂಖ್ಯೆಗಳ ವಿವರ:
ಕರ್ನಾಟಕದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) (ಸಾಮಾನ್ಯ ಪುರುಷ): 2996 ಹುದ್ದೆಗಳು
ಕರ್ನಾಟಕದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) (ಪುರುಷ ತೃತೀಯಲಿಂಗಿ): 68ಹುದ್ದೆಗಳು
ಕಲ್ಯಾಣ ಕರ್ನಾಟಕದಲ್ಲಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) (ಸಾಮಾನ್ಯ ಪುರುಷ) :279 ಹುದ್ದೆಗಳು
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) (ಪುರುಷ ತೃತೀಯ ಲಿಂಗ) :8ಹುದ್ದೆಗಳು
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) (ಸಾಮಾನ್ಯ ಪುರುಷ) (ಬೆಂಗಳೂರು ನಗರ) :79ಹುದ್ದೆಗಳು
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) (ಪುರುಷ ತೃತೀಯ ಲಿಂಗ) (ಬೆಂಗಳೂರು ನಗರ) :3ಹುದ್ದೆಗಳು
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) (ಸಾಮಾನ್ಯ ಪುರುಷ): 51ಹುದ್ದೆಗಳು

ವಿದ್ಯಾರ್ಹತೆ ವಿವರ:
ಕರ್ನಾಟಕ ರಾಜ್ಯ ಪೊಲೀಸ್ (KSP )ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಹತ್ತನೇ ತರಗತಿ ಮತ್ತು ದ್ವೀತಿಯ ಪಿಯುಸಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಕರ್ನಾಟಕ ರಾಜ್ಯ ಪೊಲೀಸ್ (KSP )ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು.

ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ದೈಹಿಕ ಪ್ರಮಾಣಿತ ಪರೀಕ್ಷೆ
ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ
ಸಾಮಾನ್ಯ ವಿದ್ಯಾರ್ಹತೆ, ಪ್ರವರ್ಗ 2(A), 2(B), 3(A), 3(B) ಅಭ್ಯರ್ಥಿಗಳಿಗೆ – 400 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ – 200 ರೂ.

ಇದನ್ನೂ ಓದಿ:Assistant Professor job : ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ:Junior Veterinary Inspector Post :ಜೂನಿಯರ್ ವೆಟರ್ನರಿ ಇನ್ಸ್ಪೆಕ್ಟರ್ ಹುದ್ದೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ರಾಜ್ಯ ಪೊಲೀಸ್ (KSP )ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಲೊಂದಿಗೆ ( ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ, ಅರ್ಹತೆ, ಇತ್ಯಾದಿ ದಾಖಲೆ)19-9-2022 ರಿಂದ 30-11-2022ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ (KSP )ಇಲಾಖೆಯ ಅಧಿಕೃತ ವೆಬ್‌ ಸೈಟ್‌ ಆದ ksp.karnataka.gov.inನಲ್ಲಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19 -ಸಪ್ಟೆಂಬರ್- 2022
ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30- ನವೆಂಬರ್- 2022

Application Invitation for Armed Police Constable 3484 Posts

Comments are closed.