ಕುವೆಂಪು ವಿಶ್ವವಿದ್ಯಾಲಯ ನೇಮಕಾತಿ 2023 : ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ

ಕುವೆಂಪು ವಿಶ್ವವಿದ್ಯಾನಿಲಯ ನೇಮಕಾತಿಯು (Kuvempu University Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ರಿಸರ್ಚ್ ಫೆಲೋ (ಜೆಆರ್‌ಎಫ್) ಹುದ್ದೆಗೆ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

ಕುವೆಂಪು ವಿಶ್ವವಿದ್ಯಾಲಯ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ವಿಶ್ವವಿದ್ಯಾಲಯದ ಹೆಸರು : ಕುವೆಂಪು ವಿಶ್ವವಿದ್ಯಾಲಯ
ಹುದ್ದೆಗಳ ಸಂಖ್ಯೆ : 01 ಹುದ್ದೆ
ಉದ್ಯೋಗ ಸ್ಥಳ : ಶಿವಮೊಗ್ಗ
ಪೋಸ್ಟ್ ಹೆಸರು : ರಿಸರ್ಚ್ ಫೆಲೋ (ಜೆಆರ್ಎಫ್)
ವೇತನ : ರೂ.25000-31000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ:
ಕುವೆಂಪು ವಿಶ್ವವಿದ್ಯಾಲಯ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯೋಮಿತಿಯನ್ನು ಕುವೆಂಪು ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ ನಿಗದಿಪಡಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕುವೆಂಪು ವಿಶ್ವವಿದ್ಯಾಲಯದ ನೇಮಕಾತಿ (ರಿಸರ್ಚ್ ಫೆಲೋ (ಜೆಆರ್‌ಎಫ್))ಗೆ ಅರ್ಜಿ ಸಲ್ಲಿಸುವ ವಿಧಾನ :
ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಪ್ರೊ. ಬಿ. ತಿಪ್ಪೇಸ್ವಾಮಿ, ಪ್ರಧಾನ ಸಂಶೋಧಕರು, ಸ್ನಾತಕೋತ್ತರ ಅನ್ವಯಿಕ ಜೀವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ಕುವೆಂಪು ವಿಶ್ವವಿದ್ಯಾಲಯ, ಜ್ಞಾನಸಹ್ಯಾದ್ರಿ, ಶಂಕರಘಟ್ಟ – 577451, ಶಿವಮೊಗ್ಗ ಇವರಿಗೆ ಮಾರ್ಚ್‌ 19, 2023 ಮೊದಲು ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : ವಿವಿಧ ಅಪ್ರೆಂಟಿಸ್‌ಗಳ ಹುದ್ದೆಗಳಿಗೆ ನೇರ ಸಂದರ್ಶನ : ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಡಿಸಿಸಿ ಬ್ಯಾಂಕ್ ನೇಮಕಾತಿ 2023 : ವಿವಿಧ ಅಕೌಂಟೆಂಟ್, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಇದನ್ನೂ ಓದಿ : IPPB ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04 ಮಾರ್ಚ್‌ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19 ಮಾರ್ಚ್ 2023

Kuvempu University Recruitment 2023 : Job Opportunity for Post Graduates

Comments are closed.