KVAFSU Recruitment 2023 : ಪಶು, ಮೀನುಗಾರಿಕೆ ಇಲಾಖೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್‌ನಲ್ಲಿ ಖಾಲಿ ಇರುವ 25 ಪ್ರೊಫೆಸರ್‌ ಮತ್ತು ಅಸೋಸಿಯೇಟ್‌ ಪ್ರೊಫೆಸರ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ (KVAFSU Recruitment 2023) ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ತಿಳಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಪರಿಶೀಲಿಸಬೇಕಾಗಿದೆ.

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (KVAFSU)ದಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಇಲಾಖೆ ಹೆಸರು : ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (KVAFSU)
ಹುದ್ದೆಗಳ ಹೆಸರು : ಪ್ರೊಫೆಸರ್‌, ಅಸೋಸಿಯೇಟ್‌ ಪ್ರೊಫೆಸರ್‌
ಒಟ್ಟು ಹುದ್ದೆಗಳು : 25 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್‌

ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆವಾರು ವಿವರ :
ಪ್ರೊಫೆಸರ್‌ : 5 ಹುದ್ದೆಗಳು
ಅಸೋಸಿಯೇಟ್‌ ಪ್ರೊಫೆಸರ್‌ : 20 ಹುದ್ದೆಗಳು

ಶೈಕ್ಷಣಿಕ ವಿವರ :
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (KVAFSU)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ಪದವಿಯಲ್ಲಿ ಕನಿಷ್ಠ ೫೫% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಹಾಗೆಯೇ ಅಭ್ಯರ್ಥಿಗಳು ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ವಯಸ್ಸಿನ ಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ. ಇನ್ನು ಎಸ್‌ಸಿ ಅಥವಾ ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ವೇತನ ಶ್ರೇಣಿ :
ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (KVAFSU)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ರೂ.131400 ರಿಂದ 217100 ರೂಗಳವರೆಗೆ ಸಂಬಳವನ್ನು ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ರೂ. 1000 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಭಾರತೀಯ ಸೇನೆಯ ಅಗ್ನಿಶಾಮಕ, ಸಹಾಯಕ ಹಾಗೂ ವಿವಿಧ ಹುದ್ದೆಗಳ ನೇಮಕಾತಿ

ಇದನ್ನೂ ಓದಿ : ಎಲ್‌ಐಸಿ ನೇಮಕಾತಿ 2023: 8000 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಉದ್ಯೋಗಾವಕಾಶ : ತಿಂಗಳಿಗೆ 1.40 ಲಕ್ಷ ಸಂಬಳ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 25 ಜನವರಿ 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 24 ಪೆಬ್ರವರಿ 2023

KVAFSU Recruitment 2023 : Animal Husbandry, Fisheries Department : Applications invited for various posts

Comments are closed.