KVAFSU ನೇಮಕಾತಿ 2023 : ವಿವಿಧ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕರ್ನಾಟಕ ಪಶುವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ನೇಮಕಾತಿಯ (KVAFSU Recruitment 2023) ಅಧಿಕೃತ ಅಧಿಸೂಚನೆಯ ಮಾರ್ಚ್ 2023 ರ ಮೂಲಕ ಅಸೋಸಿಯೇಟ್ ಪ್ರೊಫೆಸರ್, ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಾಧ್ಯಾಪಕ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

KVAFSU ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ವಿಶ್ವವಿದ್ಯಾಲಯದ ಹೆಸರು : ಕರ್ನಾಟಕ ಪಶುವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ (KVAFSU)
ಹುದ್ದೆಗಳ ಸಂಖ್ಯೆ : 25 ಹುದ್ದೆಗಳು
ಉದ್ಯೋಗ ಸ್ಥಳ : ಬೀದರ್
ಹುದ್ದೆಯ ಹೆಸರು: ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್
ವೇತನ : ರೂ.57700-218200/- ಪ್ರತಿ ತಿಂಗಳು

KVAFSU ನೇಮಕಾತಿಯ ಹುದ್ದೆಗಳ ವಿವರ :
ಪ್ರಾಧ್ಯಾಪಕ : 5 ಹುದ್ದೆಗಳು
ಅಸೋಸಿಯೇಟ್ ಪ್ರೊಫೆಸರ್ : 5 ಹುದ್ದೆಗಳು
ಸಹಾಯಕ ಪ್ರಾಧ್ಯಾಪಕ : 15 ಹುದ್ದೆಗಳು

KVAFSU ನೇಮಕಾತಿಯ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪಶುವೈದ್ಯಕೀಯ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್‌ಡಿ ಉತ್ತೀರ್ಣರಾಗಿರಬೇಕು.
  • ಸಹಾಯಕ ಪ್ರಾಧ್ಯಾಪಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯಗಳಲ್ಲಿ ಪಶುವೈದ್ಯಕೀಯ ವಿಜ್ಞಾನ/ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, M.Phil, Ph.D ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಕರ್ನಾಟಕ ಪಶುವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ನೇಮಕಾತಿ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಓಬಿಸಿ ಅಭ್ಯರ್ಥಿಗಳು : 03 ವರ್ಷಗಳು
ಎಸ್‌ಸಿ/ಎಸ್‌ಟಿ/ಪ್ರವರ್ಗ-I ಅಭ್ಯರ್ಥಿಗಳು : 05 ವರ್ಷಗಳು

ಅರ್ಜಿ ಶುಲ್ಕ:
ಎಸ್‌ಸಿ/ಎಸ್‌ಟಿ/ಪ್ರವರ್ಗ-I ಅಭ್ಯರ್ಥಿಗಳು : ರೂ.500/-
ಜಿಎಮ್/2ಎ/2ಬಿ/3ಎ & 3ಬಿ ಅಭ್ಯರ್ಥಿಗಳು : ರೂ.1000/-

ಪಾವತಿ ವಿಧಾನ:
ಕರ್ನಾಟಕ ಪಶುವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ನೇಮಕಾತಿ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಾಗಿದೆ.

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಪಶುವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ನೇಮಕಾತಿ ಪ್ರಕಾರ, ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

KVAFSU ನೇಮಕಾತಿಯ ಹುದ್ದೆವಾರು ಸಂಬಳ (ತಿಂಗಳಿಗೆ) ವಿವರ :
ಪ್ರಾಧ್ಯಾಪಕರು : ರೂ.144200-218200/-
ಅಸೋಸಿಯೇಟ್ ಪ್ರೊಫೆಸರ್ : ರೂ.131400-217100/-
ಸಹಾಯಕ ಪ್ರಾಧ್ಯಾಪಕರು : ರೂ.57700-182400/-

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಮಾರ್ಚ್ 2023

ಇದನ್ನೂ ಓದಿ : KWRD Recruitment 2023: ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : NIMHANS Recruitment 2023: ಪ್ರಾಜೆಕ್ಟ್ ಕೋ ಆರ್ಡಿನೇಟರ್, ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : Britannia Recruitment : ಮಹಿಳಾ ಉದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಬ್ರಿಟಾನಿಯಾ ಕಂಪೆನಿ

KVAFSU Recruitment 2023 : Application Invitation for Various Professor Posts

Comments are closed.