KVB ನೇಮಕಾತಿ 2023 : ವಿವಿಧ ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರೂರ್ ವೈಶ್ಯ ಬ್ಯಾಂಕ್ (KVB Recruitment 2023) ನೇಮಕಾತಿ ಅಧಿಕೃತ ಅಧಿಸೂಚನೆಯ ಮಾರ್ಚ್ 2023 ರ ಮೂಲಕ ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್, ಬಿಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಕರೂರ್ ವೈಶ್ಯ ಬ್ಯಾಂಕ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.

ಕರೂರ್ ವೈಶ್ಯ ಬ್ಯಾಂಕ್ (KVB) ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಕರೂರ್ ವೈಶ್ಯ ಬ್ಯಾಂಕ್ (KVB)
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಕರ್ನಾಟಕ, ಕೇರಳ, ತೆಲಂಗಾಣ ಹಾಗೂ ತಮಿಳುನಾಡು
ಹುದ್ದೆಯ ಹೆಸರು : ಬಿಸಿನೆಸ್ ಡೆವಲಪ್‌ಮೆಂಟ್ ಮ್ಯಾನೇಜರ್, ಬಿಸಿನೆಸ್ ಡೆವಲಪ್‌ಮೆಂಟ್ ಎಕ್ಸಿಕ್ಯೂಟಿವ್

ಶೈಕ್ಷಣಿಕ ಅರ್ಹತೆ :
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಕರೂರ್ ವೈಶ್ಯ ಬ್ಯಾಂಕ್ (KVB) ಹುದ್ದೆವಾರು ವಯೋಮಿತಿ ವಿವರ :
ವ್ಯಾಪಾರ ಅಭಿವೃದ್ಧಿ ವ್ಯವಸ್ಥಾಪಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
ವ್ಯಾಪಾರ ಅಭಿವೃದ್ಧಿ ಕಾರ್ಯನಿರ್ವಾಹಕ : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯಸ್ಸನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಕರೂರ್ ವೈಶ್ಯ ಬ್ಯಾಂಕ್ ನಿಯಮಗಳ ಪ್ರಕಾರ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಮೈಸೂರು ಪೇಂಟ್ಸ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : KVAFSU ನೇಮಕಾತಿ 2023 : ವಿವಿಧ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಅಹ್ವಾನ

ಇದನ್ನೂ ಓದಿ : KWRD Recruitment 2023: ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 03 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಮಾರ್ಚ್ 2023

KVB Recruitment 2023 : Application Invitation for Various Manager Posts

Comments are closed.