KVB Recruitment 2023 : ಕರೂರ್ ವೈಶ್ಯ ಬ್ಯಾಂಕ್‌ನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ (KVB Recruitment 2023) ಜುಲೈ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸೇಲ್ಸ್ ಮತ್ತು ಸರ್ವಿಸ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಕರೂರ್ ವೈಶ್ಯ ಬ್ಯಾಂಕ್ ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಕರೂರ್ ವೈಶ್ಯ ಬ್ಯಾಂಕ್ (KVB)
ಪೋಸ್ಟ್‌ಗಳ ಸಂಖ್ಯೆ : ನಿರ್ದಿಷ್ಟಪಡಿಸಲಾಗಿಲ್ಲ
ಉದ್ಯೋಗ ಸ್ಥಳ : ಅಖಿಲ ಭಾರತ
ಪೋಸ್ಟ್ ಹೆಸರು : ಸೇಲ್ಸ್ ಮತ್ತು ಸರ್ವಿಸ್ ಅಸೋಸಿಯೇಟ್
ವೇತನ : ರೂ.15000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದಾದರೂ ಪದವಿಯಲ್ಲಿ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ ವಿವರ :
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ ವಯಸ್ಸು 23 ವರ್ಷ ವಯಸ್ಸನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಕರೂರ್ ವೈಶ್ಯ ಬ್ಯಾಂಕ್ ನಿಯಮಗಳ ಪ್ರಕಾರ

ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:
ಕರೂರ್ ವೈಶ್ಯ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : UPSC Recruitment 2023 : UPSC ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : IBPS Recruitment 2023 : IBPS ನೇಮಕಾತಿ 2023 : 4545 ಕ್ಲರ್ಕ್ ಹುದ್ದೆಗಳಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 20 ಜುಲೈ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31 ಜುಲೈ 2023

KVB Recruitment 2023 : Karur Vaishya Bank Job Opportunity for Graduates, Apply Now

Comments are closed.