ಲಕ್ಷ್ಮೀ ಸಹಕಾರಿ ಬ್ಯಾಂಕ್‌ ನಲ್ಲಿ ಅಕೌಂಟೆಂಟ್‌ ಉದ್ಯೋಗಾವಕಾಶ : ಕೂಡಲೇ ಅರ್ಜಿ ಸಲ್ಲಿಸಿ

ಲಕ್ಷ್ಮೀ ಸಹಕಾರಿ ಬ್ಯಾಂಕ್‌ ನಿಯಮಿತ ಗುಳೇದಗುಡ್ಡದಲ್ಲಿ (Laxmi cooperative bank) ಖಾಲಿ ಇರುವ 17 ಅಕೌಂಟೆಂಟ್‌ ಮತ್ತು ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ (Lakshmi Cooperative Bank Accountant Post) ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಲಕ್ಷ್ಮೀ ಸಹಕಾರಿ ಬ್ಯಾಂಕ್‌ ನಿಯಮಿತ ಗುಳೇದಗುಡ್ಡದಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಇಲಾಖೆ ಹೆಸರು : ಲಕ್ಷ್ಮೀ ಸಹಕಾರಿ ಬ್ಯಾಂಕ್‌ ನಿಯಮಿತ ಗುಳೇದಗುಡ್ಡ
ಹುದ್ದೆಗಳ ಹೆಸರು : ಅಕೌಂಟೆಂಟ್‌ ಮತ್ತು ಕಿರಿಯ ಸಹಾಯಕ
ಒಟ್ಟು ಹುದ್ದೆಗಳು : 17 ಹುದ್ದೆಗಳು
ಉದ್ಯೋಗ ಸ್ಥಳ : ಬಾಗಲಕೋಟೆ

ಲಕ್ಷ್ಮೀ ಸಹಕಾರಿ ಬ್ಯಾಂಕ್‌ ನಿಯಮಿತ ಗುಳೇದಗುಡ್ಡದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಖ್ಯೆಯ ವಿವರ :
ಅಕೌಂಟೆಂಟ್‌ (ಕಂಪ್ಯೂಟರ್‌ ಪ್ರೋಗ್ರಾಮರ್‌) : 1 ಹುದ್ದೆ
ಕಿರಿಯ ಸಹಾಯಕ : 16 ಹುದ್ದೆಗಳು

ವಿದ್ಯಾರ್ಹತೆ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್‌ ಆಪರೇಷನ್‌ ಮತ್ತು ಅಪ್ಲಿಕೇಶನ್‌ ಪದವಿ ಅಥವಾ ಯಾವುದೇ ಪದವಿ ಜೊತೆಗೆ ಕಂಪ್ಯೂಟರ್‌ ಜ್ಞಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪಡೆದಿರಬೇಕು.

ವಯೋಮಿತಿ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 35ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.

ವಯೋಮಿತಿ ಸಡಿಲಿಕೆ ವಿವರ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಸಂಬಳ ವಿವರ :
ಅಕೌಂಟಂಟ್‌ ಹುದ್ದೆಗೆ : ಮಾಸಿಕ ರೂ. 21600ರಿಂದ 40050 ವೇತನ
ಸಹಾಯಕ ನಿರ್ದೇಶಕ ಹುದ್ದೆಗಳಿಗೆ : ರೂ. 16000 ರಿಂದ 29600 ರೂ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ ವಿವರ :
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 1000
ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : ರೂ. 500

ಆಯ್ಕೆ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳೊಂದಿಗೆ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ, ಲಕ್ಷ್ಮೀ ಸಹಕಾರಿ ಬ್ಯಾಂಕ್‌ ನಿಯಮಿತ, ಪುರಸಭೆ ಹತ್ತಿರ, ಗುಳೇದಗುಡ್ಡ – 587203 ಬಾಗಲಕೋಟೆ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : ಬೆಂಗಳೂರು ಮಹಾನಗರ ಪಾಲಿಕೆ : 3673 ಗ್ರೂಪ್‌ “ಡಿ” ವೃಂದದ ಪೌರಕಾರ್ಮಿಕ ಹುದ್ದೆಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ನಗರ ಸಭೆ, ಪಟ್ಟಣ ಪಂಚಾಯತ್‌ನಲ್ಲಿ 1214 ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಬಾಗಲಕೋಟೆ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 16 ಜನವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಜನವರಿ2023

Lakshmi Cooperative Bank Accountant Post : Accountant Job Vacancy in Lakshmi Cooperative Bank : Apply Immediately

Comments are closed.