ಎಲ್‌ಐಸಿ ನೇಮಕಾತಿ 2023: 8000 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಲೈಫ್‌ ಇನ್ಶೂರೆನ್ಸ್‌ ಕಾರ್ಫೋರೇಶನ್‌ ಆಫ್‌ ಇಂಡಿಯಾ (LIC) ನಲ್ಲಿ (LIC Recruitment 2023) ಖಾಲಿ ಇರುವ 8345 ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿ ಅರ್ಜಿಯನ್ನು ಕರೆಯಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ತಿಳಿಸಿದ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲಿಸಬೇಕಾಗಿದೆ.

ಲೈಫ್‌ ಇನ್ಶೂರೆನ್ಸ್‌ ಕಾರ್ಫೋರೇಶನ್‌ ಆಫ್‌ ಇಂಡಿಯಾ (LIC)ದಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಲೈಫ್‌ ಇನ್ಶೂರೆನ್ಸ್‌ ಕಾರ್ಫೋರೇಶನ್‌ ಆಫ್‌ ಇಂಡಿಯಾ (LIC)
ಹುದ್ದೆಗಳ ಹೆಸರು : ಅಭಿವೃದ್ಧಿ ಅಧಿಕಾರಿ
ಒಟ್ಟು ಹುದ್ದೆಗಳು : 8345 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್‌

ಲೈಫ್‌ ಇನ್ಶೂರೆನ್ಸ್‌ ಕಾರ್ಫೋರೇಶನ್‌ ಆಫ್‌ ಇಂಡಿಯಾ (LIC)ದಲ್ಲಿ ಖಾಲಿ ಇರುವ ವಲಯವಾರು ಹುದ್ದೆಗಳ ವಿವರ :

  • ದಕ್ಷಿಣ ವಲಯ ಕಚೇರಿ : 1516
  • ದಕ್ಷಿಣ ಮಧ್ಯ ವಲಯ ಕಚೇರಿ : 1408
  • ಉತ್ತರ ಮಧ್ಯ ವಲಯ ಕಚೇರಿ : 1033
  • ಉತ್ತರ ವಲಯ ಕಚೇರಿ : 1216
  • ಪೂರ್ವ ಕೇಂದ್ರ ವಲಯ ಕಚೇರಿ : 669
  • ಪಶ್ಚಿಮ ವಲಯ ಕಚೇರಿ : 1942
  • ಕೇಂದ್ರ ವಲಯ ಕಚೇರಿ : 561

ವಿದ್ಯಾರ್ಹತೆ ವಿವರ :
ಜೀವ ವಿಮಾ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದಾದರೂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಜೀವ ವಿಮಾ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಅಭ್ಯರ್ಥಿಯು ಜನವರಿ 1, 2023 ರಂತೆ ಕನಿಷ್ಠ 21 ವರ್ಷಗಳು ಪೂರ್ಣಗೊಳಿಸಿರಬೇಕು. ಹಾಗೂ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
ಜೀವ ವಿಮಾ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ನೀಡಲಾಗುತ್ತದೆ. ಹಾಗೆಯೇ ಎಸ್‌ಸಿ ಅಥವಾ ಎಸ್‌ ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ ಶ್ರೇಣಿ ವಿವರ :
ಜೀವ ವಿಮಾ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಗಳ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 35650 ರಿಂದ 90205 ವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಶುಲ್ಕ :
ಇತರ ಎಲ್ಲಾ ಅಭ್ಯರ್ಥಿಗಳಿಗೆ : ರೂ. 750
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ : ರೂ. 100

ಆಯ್ಕೆ ವಿಧಾನ :
ಜೀವ ವಿಮಾ ನಿಗಮ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಉದ್ಯೋಗಾವಕಾಶ : ತಿಂಗಳಿಗೆ 1.40 ಲಕ್ಷ ಸಂಬಳ

ಇದನ್ನೂ ಓದಿ : Indian Navy Recruitment 2023: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ ಪ್ರಾರಂಭ: ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ : KSRTC Recruitment 2023 : ಕೆಎಸ್‌ಆರ್‌ಟಿಸಿ : 2000 ಡ್ರೈವರ್‌ ಹುದ್ದೆಗೆ ನೇಮಕಾತಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸುವ ಆರಂಭ ದಿನಾಂಕ : 21 ಜನವರಿ 2023
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10 ಫೆಬ್ರವರಿ 2023

LIC Recruitment 2023: Apply for more than 8000 Various Posts

Comments are closed.