MSIL ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ, ವೇತನ 80 ಸಾವಿರ ರೂ.

ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ನೇಮಕಾತಿ (MSIL Recruitment 2023) ಏಪ್ರಿಲ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕರು, ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

MSIL Recruitment 2023 : ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಸಂಸ್ಥೆಯ ಹೆಸರು : ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL)
ಹುದ್ದೆಗಳ ಸಂಖ್ಯೆ : 71 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಸಹಾಯಕ ವ್ಯವಸ್ಥಾಪಕರು, ಮೇಲ್ವಿಚಾರಕರು
ವೇತನ : ರೂ.21900-80100/- ಪ್ರತಿ ತಿಂಗಳು

ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

  • ಸಹಾಯಕ ವ್ಯವಸ್ಥಾಪಕರು : 23 ಹುದ್ದೆಗಳು
  • ಮೇಲ್ವಿಚಾರಕ : 23 ಹುದ್ದೆಗಳು
  • ಪದವೀಧರ ಗುಮಾಸ್ತರು : 6 ಹುದ್ದೆಗಳು
  • ಗುಮಾಸ್ತರು : 13 ಹುದ್ದೆಗಳು
  • ಮಾರಾಟ ಪ್ರತಿನಿಧಿ/ಪ್ರೋಗ್ರಾಮರ್ : 6 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಅಧಿಕೃತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನಿಯಮಗಳ ಪ್ರಕಾರ ಯಾವುದಾದರೂ ಪದವಿ ಹಾಗೂ ಸ್ನಾತಕೋತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ವಿವರ :
ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಅಧಿಕೃತ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನಿಯಮಗಳ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:
ಮೈಸೂರು ಸೇಲ್ಸ್ ಇಂಟರ್‌ನ್ಯಾಶನಲ್ ಲಿಮಿಟೆಡ್ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ (ತಿಂಗಳಿಗೆ) ವಿವರ :

  • ಸಹಾಯಕ ವ್ಯವಸ್ಥಾಪಕರು : ರೂ.44200-80100/-
  • ಮೇಲ್ವಿಚಾರಕ : ರೂ.35150-64250/-
  • ಪದವೀಧರ ಗುಮಾಸ್ತರು : ರೂ.25200-50150/-
  • ಗುಮಾಸ್ತರು : ರೂ.21900-43100/-
  • ಮಾರಾಟ ಪ್ರತಿನಿಧಿ/ಪ್ರೋಗ್ರಾಮರ್ : ರೂ.28950-55350/-

ಇದನ್ನೂ ಓದಿ : ಯೆಸ್ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : KARBWWB recruitment 2023 : ಫೀಲ್ಡ್ ಇನ್ಸ್‌ಪೆಕ್ಟರ್‌ಗಳ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಮೇ 2023
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20 ಮೇ 2023

MSIL Recruitment 2023 : Vacancy for Various Posts, Salary Rs. 80 thousand

Comments are closed.