ಮೆಕ್ಯಾನಿಕಲ್ ಹಾಗೂ ಎಲೆಕ್ಟ್ರಿಕ್ ಡಿಪ್ಲೊಮಾ ಮಾಡಿದ ಯುವಕರಿಗೆ ಸರ್ಕಾರಿ ಉದ್ಯೋಗ ಮಾಡುವ ಸುವರ್ಣಾವಕಾಶ ಒದಗಿ ಬಂದಿದೆ.
ಅದೇನೆಂದರೆ ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL) ಸಹಾಯಕ ಫೋರ್‌ಮ್ಯಾನ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.
ಈ ಅಧಿಕೃತ ಅಧಿಸೂಚನೆಯ ಪ್ರಕಾರ ಈ ನೇಮಕಾತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಪ್ರಕ್ರಿಯೆಯು ಫೆಬ್ರವರಿ 11 ರಿಂದ ಪ್ರಾರಂಭಗೊಂಡಿದೆ. ಅರ್ಹ ಅಭ್ಯರ್ಥಿಗಳು ಎನ್‌ಸಿಎಲ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆ ದಿನವಾಗಿದೆ ಎಂದು ಎನ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
ನೇಮಕಾತಿ ವಿವರ
ಈ ನೇಮಕಾತಿಯ ಮೂಲಕ ಎನ್‌ಸಿಎಲ್ ಒಟ್ಟು 270 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅದು ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.
ಸಹಾಯಕ ಫೋರ್‌ಮನ್ (ಇ & ಟಿ) (ತರಬೇತಿ) ಗ್ರೇಡ್-ಸಿ – 14
ಸಹಾಯಕ ಫೋರ್‌ಮನ್ (ಮೆಕ್ಯಾನಿಕಲ್) (ತರಬೇತಿ) ಗ್ರೇಡ್ ಸಿ – 87 (87)
ಸಹಾಯಕ ಫೋರ್‌ಮನ್ (ಮೆಕ್ಯಾನಿಕಲ್) (ತರಬೇತಿ) ಗ್ರೇಡ್-ಸಿ – 21
ಸಹಾಯಕ ಫೋರ್‌ಮನ್ (ಎಲೆಕ್ಟ್ರಿಕಲ್) (ತರಬೇತಿ) ಗ್ರೇಡ್-ಸಿ – 74
ಸಹಾಯಕ ಫೋರ್‌ಮನ್ (ಎಲೆಕ್ಟ್ರಿಕಲ್) (ತರಬೇತಿ) ಗ್ರೇಡ್-ಸಿ – 74
ಶೈಕ್ಷಣಿಕ ಅರ್ಹತೆ
ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್‌ನಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಸಂಬಂಧಿತ ಕ್ಷೇತ್ರದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಪಡೆದಿರಬೇಕು.
ಇದನ್ನೂ ಓದಿ: ನಿಮ್ಹಾನ್ಸ್‌ನಿಂದ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇಮಕಾತಿ: ಮಾರ್ಚ್ 4 ರೊಳಗೆ ಅರ್ಜಿ ಹಾಕಿ
ವಯೋಮಿತಿ
ಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಗಳಿಗಿಂತ ಕಡಿಮೆಯಿರಬಾರದು ಮತ್ತು 30 ವರ್ಷಗಳಿಗಿಂತ ಹೆಚ್ಚಿರಬಾರದು. ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಮೀಸಲಾತಿ ಪಡೆಯದ ಅಭ್ಯರ್ಥಿಗಳು ತಮ್ಮ ಅರ್ಜಿಯೊಂದಿಗೆ 1080 ರೂ. ಶುಲ್ಕವನ್ನು ಸಲ್ಲಿಸಬೇಕಾಗುತ್ತದೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕರು ಮತ್ತು ಇಲಾಖಾ ನೌಕರರು ಅರ್ಜಿ ನಮೂನೆಯನ್ನು ಉಚಿತವಾಗಿ ಭರ್ತಿ ಮಾಡಬಹುದು.
ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ.
ಅರ್ಜಿ ಸಲ್ಲಿಕೆ ಹೇಗೆ?
- ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು, ಮೊದಲಿಗೆ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ nclcil.in ಗೆ ಭೇಟಿ ನೀಡಬೇಕು.
- ಬಳಿಕ, ಕರಿಯರ್ ಟ್ಯಾಬ್‌ಗೆ ಹೋಗಿ ಮತ್ತು ನೇಮಕಾತಿಗೆ ಸಂಬಂಧಿಸಿದ ಅರ್ಜಿ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಈಗ ನೀವು ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
- ಇದಾದನಂತರ, ಅಭ್ಯರ್ಥಿಯು ಇತರ ವಿವರಗಳನ್ನು ಭರ್ತಿ ಮಾಡುವ ಮೂಲಕ ಫಾರ್ಮ್ ಅನ್ನು ಪೂರ್ಣಗೊಳಿಸಬೇಕು.
- ಅಂತಿಮವಾಗಿ, ನಿಗದಿತ ಶುಲ್ಕವನ್ನು ಪಾವತಿಸಿ, ಇನ್ನೊಮ್ಮೆ ಫಾರ್ಮ್ ಅನ್ನು ಪರಿಶೀಲಿಸಿ. ಕೊನೆಯದಾಗಿ ಅರ್ಜಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಿ.


