ನಾರ್ದರ್ನ್‌ ಕೋಲ್‌ಫೀಲ್ಡ್‌ನಲ್ಲಿ ಉದ್ಯೋಗಾವಕಾಶ: ಡಿಪ್ಲೊಮಾ, ಪದವೀಧರರು ಅರ್ಜಿ ಸಲ್ಲಿಸಿ

ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL) ಆಪರೇಟರ್, ಸ್ಟಾಫ್ ನರ್ಸ್ ಮತ್ತು ಓವರ್‌ಸೀಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ.

NCL Trainee Vacancy 2026: ಡಿಪ್ಲೊಮಾ, ಪದವಿ ಮುಗಿಸಿ ಕೆಲಸದ ಹುಡುಕಾಟದಲ್ಲಿರುವವರಿಗೆ ಗುಡ್‌ ನ್ಯೂಸ್‌. ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL) ಆಪರೇಟರ್, ಸ್ಟಾಫ್ ನರ್ಸ್ ಮತ್ತು ಓವರ್‌ಸೀಯರ್ ಹುದ್ದೆಗಳಿಗೆ ಅಧಿಕೃತ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿ ಮೂಲಕ ಅದು ಒಟ್ಟು 577 ಹುದ್ದೆಗಳನ್ನು ಭರ್ತಿ ಮಾಡಕೊಳ್ಳಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಮೇ 1 ರ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳೇನು? ಇಲ್ಲಿದೆ ಓದಿ.

ಹುದ್ದೆಯ ವಿವರ

ಎನ್‌ಸಿಎಲ್‌ ಒಟ್ಟು 577 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅದರಲ್ಲಿ 472 ಆಪರೇಟರ್‌ ಹುದ್ದೆಗಳು, 75 ಸ್ಟಾಫ್‌ ನರ್ಸ್‌ ಮತ್ತು 30 ಓವರ್‌ಸೀಯರ್‌ಗೆ ಮೀಸಲಿಡಲಾಗಿದೆ.

ಯಾರು ಅರ್ಜಿ ಸಲ್ಲಿಸಬಹುದು?

ಆಪರೇಟರ್ (ಟ್ರೈನಿ) ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಭಾರತದ ಮಾನ್ಯತೆ ಪಡೆದ ಸಂಸ್ಥೆಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಅವರು ಹೆವಿ ಮೋಟಾರ್ ವೆಹಿಕಲ್ ಲೈಸೆನ್ಸ್ ಅನ್ನು ಸಹ ಹೊಂದಿರಬೇಕು. ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಡಿಪ್ಲೊಮಾ ಹೊಂದಿರಬೇಕು. ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು 10 ನೇ ತರಗತಿ ಉತ್ತೀರ್ಣರಾಗಿರಬೇಕು ಜೊತೆಗೆ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾವನ್ನು ಸಹ ಹೊಂದಿರಬೇಕು.

ಇದನ್ನೂ ಓದಿ: ರೈಲ್ವೆ ಗ್ರೂಪ್-ಡಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದೀರಾ ? ಮನೆಯಲ್ಲೇ ಕುಳಿತು ‘ಉಚಿತವಾಗಿ’ ಕಲಿಯಲು ಇಲ್ಲಿದೆ ಬೆಸ್ಟ್‌ ಟಿಪ್ಸ್‌

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಮತ್ತು ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಭರಿಸಬೇಕಾಗುತ್ತದೆ. ಮೀಸಲಾತಿ ಇಲ್ಲದ ಅಭ್ಯರ್ಥಿಗಳು 1,000 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಮೀಸಲು ವರ್ಗದ ಅಭ್ಯರ್ಥಿಗಳು ನೋಂದಣಿ ಶುಲ್ಕದಿಂದ ವಿನಾಯಿತಿ ಪಡೆದಿರುತ್ತಾರೆ.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಅರ್ಹ ಅಭ್ಯರ್ಥಿಗಳು ಎನ್‌ಸಿಎಲ್‌ನ ಅಧಿಕೃತ ವೆಬ್‌ಸೈಟ್‌ nclcil.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories