ಎನ್ಎಚ್ಎಐ (ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ ) ಸಿವಿಲ್ ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗಾವಕಾಶ ನೀಡಲು ಮುಂದಾಗಿದೆ. 41 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗೇಟ್ ಪರೀಕ್ಷೆ 2021ರ ಅಂಕಗಳ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದೆ.
ಹುದ್ದೆ ವಿವರ : ಡೆಪ್ಯುಟಿ ಮ್ಯಾನೇಜರ್ (ಟೆಕ್ನಿಕಲ್) 41
ಶೈಕ್ಷಣಿಕ ಅರ್ಹತೆ : ಸಿವಿಲ್ ಇಂಜಿನಿಯರಿಂಗ್ನಲ್ಲಿ ಪದವಿ ಮಾಡಿರ ಬೇಕು. 2021ರ ಗೇಟ್ ಪರೀಕ್ಷೆಯ ಅಂಕ ಆಧರಿಸಿ ಆಯ್ಕೆ ಮಾಡಲಾಗುವುದು. ಅಂತಿಮ ವರ್ಷ/ ಸೆಮಿಸ್ಟರ್ನಲ್ಲಿ ಅಧ್ಯಯನ ಮಾಡುತ್ತಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಲಿತಾಂಶ ಪ್ರಕಟವಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ : ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದ್ದು, ಮೀಸಲಾತಿ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದನ್ವಯ ವಯೋ ಸಡಿಲಿಕೆ ನೀಡಲಾಗುವುದು.
ಮೀಸಲಾತಿ : ಸಾಮಾನ್ಯವರ್ಗದ ಅಭ್ಯರ್ಥಿಗಳಿಗೆ 18 ಸ್ಥಾನ, ಎಸ್ಸಿಗೆ 6, ಎಸ್ಟಿಗೆ 4, ಇತರ ಹಿಂದುಳಿದ ವರ್ಗಕ್ಕೆ 10, ಆಥಿರ್ಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗಳಿಗೆ 3 ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಇದರಲ್ಲಿ 2 ಸ್ಥಾನಗಳನ್ನು ಅಂಗವಿಕಲ ಅಭ್ಯರ್ಥಿಗಳಿಗೆ ಕಾಯ್ದಿರಿಸಲಾಗಿದೆ.
ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳ ಶೈಕ್ಷಣಿಕ ಅಂಕ ಹಾಗೂ 2021ರ ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕ ಆಧರಿಸಿ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೇ ದಿನ: 28.5.2021
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯ ಪ್ರತಿಯೊಂದನ್ನು ತಮ್ಮ ಬಳಿ ಇರಿಸಿ ಕೊಳ್ಳುವಂತೆ ಸೂಚಿಸಲಾಗಿದೆ. ಅಂಗವಿಕಲ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಇತ್ತೀಚಿನ ಅಂಗವಿಕಲ ಪ್ರಮಾಣಪತ್ರ ಸಲ್ಲಿಸಬೇಕು. ಶೇ. 40ಕ್ಕಿಂತ ಹೆಚ್ಚು ಅಂಗವಿಕಲತೆಯನ್ನು ಹೊಂದಿರಬಾರದು.
ಹೆಚ್ಚಿನ ಮಾಹಿತಿಗಾಗಿ https://nhai.gov.in ಅಧಿಕೃತ ವೆಬ್ ಸೈಟ್ ಸಂಪರ್ಕಿಸಿ
ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ : https://bit.ly/2QVRvdK
