NIANP Recruitment 2022 : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಡಿಸೈನರ್ ಹುದ್ದೆಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿನಲ್ಲಿ (NIANP) ಖಾಲಿ ಇರುವ ಡಿಸೈನರ್ ಹುದ್ದೆಗಳಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು (NIANP Recruitment 2022)ಆಹ್ವಾನಿಸಲಾಗಿದೆ. ಡಿಸೈನರ್‌ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನವೆಂಬರ್‌ 24, 2022ರಂದು ಬೆಳಿಗ್ಗೆ 10:30ಗೆ ನಡೆಯಲಿರುವ ನೇರ ಸಂದರ್ಶನಕ್ಕೆ ಹಾಜರಾಗಬೇಕಾಗಿದೆ.


ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿನಲ್ಲಿ (NIANP)ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಅಂಡ್ ಫಿಸಿಯಾಲಜಿ (NIANP)
ಹುದ್ದೆಗಳ ಸಂಖ್ಯೆ : 1
ಉದ್ಯೋಗ ಸ್ಥಳ : ಬೆಂಗಳೂರು – ಕರ್ನಾಟಕ
ಪೋಸ್ಟ್ ಹೆಸರು : ಡಿಸೈನರ್
ವೇತನ : ರೂ.24000/- ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ :
NIANP ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಕಂಪ್ಯೂಟರ್ ಅಪ್ಲಿಕೇಶನ್/IT/CSE/ಆರ್ಟಿಫಿಶಿಯಲ್ ಇಂಟೆಲಿಜೆನ್ಸ್‌ನಲ್ಲಿ ಡಿಪ್ಲೊಮಾ, ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ ವಿವರ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ (NIANP) ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 01-07-2022 ರಂತೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸನ್ನು ಒಳಗೊಂಡಿರಬೇಕು.


ಆಯ್ಕೆ ಪ್ರಕ್ರಿಯೆ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ (NIANP) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ (NIANP) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ (NIANP) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ, ಗುರುತಿನ ಚೀಟಿ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್‌ ಹಾಗೂ ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆ) ಆಡಳಿತಾತ್ಮಕ ಬ್ಲಾಕ್, ICAR-NIANP, ಆಡುಗೋಡಿ, ಬೆಂಗಳೂರು – 560030 ನವೆಂಬರ್‌ 24,2022ರ ಬೆಳಿಗ್ಗೆ 10:30ಕ್ಕೆ ನಡೆಯುವ ವಾಕ್-ಇನ್-ಇಂಟರ್ವ್ಯೂಗೆ ಹಾಜರಬೇಕಾಗಿದೆ.

ಪ್ರಮುಖ ದಿನಾಂಕಗಳು:
ಅರ್ಜಿಸಲ್ಲಿಸಲು ಪ್ರಾರಂಭ ಮಾಡಿದ ದಿನಾಂಕ: 02-11-2022
ನೇರ ಸಂದರ್ಶನ ದಿನಾಂಕ: 24-11-2022 10:30 AM

ಇದನ್ನೂ ಓದಿ : Sainik School Bijapur Recruitment 2022 : ಅಕೌಂಟೆಂಟ್‌ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : Central Railway Recruitment 2022:10ನೇ ತರಗತಿ, ಪಿಯುಸಿ ಓದಿದವರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ : UAS Dharwad Recruitment 2022 : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅನಿಮಲ್ ನ್ಯೂಟ್ರಿಷನ್ ಮತ್ತು ಫಿಸಿಯಾಲಜಿ (NIANP) ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೆಚ್ಚಿನ ಮಾಹಿತಿಗೆ ಸಂಬಂಧ ಪಟ್ಟಂತೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಆದ nianp.res.in ಮೂಲಕ ಅಭ್ಯರ್ಥಿಗಳು ಸಂಪರ್ಕಿಸಬಹುದಾಗಿದೆ.

NIANP Recruitment 2022 : Application Invitation for the post of National Institute Designer

Comments are closed.