ಸೋಮವಾರ, ಏಪ್ರಿಲ್ 28, 2025
Homejob NewsNIT ಕರ್ನಾಟಕ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

NIT ಕರ್ನಾಟಕ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

- Advertisement -

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದ ನೇಮಕಾತಿ (NIT Karnataka Recruitment 2023) ಏಪ್ರಿಲ್ 2023 ರ ಅಧಿಕೃತ ಅಧಿಸೂಚನೆ ಮೂಲಕ ವಿದ್ಯಾರ್ಥಿ ಇಂಟರ್ನ್‌ಶಿಪ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

NIT Karnataka Recruitment 2023 : ಎನ್‌ಐಟಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಸಂಸ್ಥೆಯ ಹೆಸರು : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT)
ಹುದ್ದೆಗಳ ಸಂಖ್ಯೆ : 02 ಹುದ್ದೆಗಳು
ಉದ್ಯೋಗ ಸ್ಥಳ : ಸುರತ್ಕಲ್
ಹುದ್ದೆಯ ಹೆಸರು : ವಿದ್ಯಾರ್ಥಿ ಇಂಟರ್ನ್‌ಶಿಪ್ ಹುದ್ದೆ
ವೇತನ ಶ್ರೇಣಿ : ರೂ.5000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.E ಅಥವಾ B.Tech ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ ವಿವರ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು NIT ಕರ್ನಾಟಕ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಅರ್ಜಿ ಶುಲ್ಕ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ನಿಮ್ಹಾನ್ಸ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಯಾದಗಿರಿ ಜಿಲ್ಲಾ ನ್ಯಾಯಾಲಯದ ನೇಮಕಾತಿ 2023 : 6 ಸ್ಟೆನೋಗ್ರಾಫರ್ ಗ್ರೇಡ್-III ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 23 ಮಾರ್ಚ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಏಪ್ರಿಲ್‌ 2023
ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ದಿನಾಂಕ : 25 ಏಪ್ರಿಲ್‌ 2023
ಆಯ್ಕೆಯಾದ ವಿದ್ಯಾರ್ಥಿಗಳಿಂದ ಸ್ವೀಕೃತಿ ದಿನಾಂಕ : 28 ಏಪ್ರಿಲ್‌ 2023

NIT Karnataka Recruitment 2023 : Application Invitation for Various Posts

RELATED ARTICLES

Most Popular