ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಉದ್ಯೋಗಾವಕಾಶ : ತಿಂಗಳಿಗೆ 1.40 ಲಕ್ಷ ಸಂಬಳ

ಮಂಗಳೂರಿನಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್. ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ (NMPT Recruitment 2023) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಬೇಕಾಗಿದೆ. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1.40 ಲಕ್ಷ ಸಂಬಳ ಇರುತ್ತದೆ.

ಒಟ್ಟು 2 ಸಹಾಯಕ ಕಾರ್ಯದರ್ಶಿ (ಸಹಾಯಕ ಕಾರ್ಯದರ್ಶಿ) ಹುದ್ದೆಗಳು ಖಾಲಿಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣಾವಕಾಶ. ಅಭ್ಯರ್ಥಿಗಳು ತಡಮಾಡದೆ ತಕ್ಷಣ ಅರ್ಜಿ ಸಲ್ಲಿಸಬೇಕಾಗಿದೆ. ಫೆಬ್ರವರಿ 13, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ. ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಈ ಕೆಳಗೆ ತಿಳಿಸಿದ ಮಾಹಿತಿಯನ್ನು ಸಂಪೂರ್ಣವಾಗಿ ಪರಿಶೀಲಿಸಬೇಕಾಗಿದೆ.

ವಿದ್ಯಾರ್ಹತೆ ವಿವರ :
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಯಾವದಾದರೂ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷಗಳನ್ನು ಮೀರಬಾರದು. ಮೀಸಲಾತಿಗೆ ಒಳಪಟ್ಟಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಸಂಬಳ ವಿವರ :
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ರೂ.40,000 ದಿಂದ 1,40,000 ರೂ ವರೆಗೆ ವೇತನವನ್ನು ನೀಡಲಾಗುತ್ತದೆ.

ಉದ್ಯೋಗ ಸ್ಥಳ :
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಹುದ್ದೆಗೆ ಆಯ್ಕೆಯಾದ ಆಭ್ಯರ್ಥಿಗಳು ಮಂಗಳೂರಿನಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

NMPT Recruitment 2023 : ಈ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ?

ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕಾಗಿದೆ. ಕಾರ್ಯದರ್ಶಿ, ಹೊಸ ಮಂಗಳೂರು ಬಂದರು ಪ್ರಾಧಿಕಾರ, ಪಣಂಬೂರು, ಮಂಗಳೂರು-575010.

ಇದನ್ನೂ ಓದಿ : Indian Navy Recruitment 2023: ಭಾರತೀಯ ನೌಕಾಪಡೆಯಲ್ಲಿ ನೇಮಕಾತಿ ಪ್ರಾರಂಭ: ಇಲ್ಲಿದೆ ಸಂಪೂರ್ಣ ಮಾಹಿತಿ

ಇದನ್ನೂ ಓದಿ : KSRTC Recruitment 2023 : ಕೆಎಸ್‌ಆರ್‌ಟಿಸಿ : 2000 ಡ್ರೈವರ್‌ ಹುದ್ದೆಗೆ ನೇಮಕಾತಿ

ಇದನ್ನೂ ಓದಿ : HESCOM Recruitment 2023‌ : ಹೆಸ್ಕಾಂನಲ್ಲಿ ನೇರ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು :
ಅಪ್ಲಿಕೇಶನ್ ಪ್ರಾರಂಭ ದಿನಾಂಕ : 12/01/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 13, 2023.

NMPT Recruitment 2023 : Job Opportunity in New Mangalore Port Trust : Salary 1.40 lakh per month

Comments are closed.