NMPT Recruitment 2023: ನವಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಸಹಾಯಕ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ: ವೇತನ, 70000

(NMPT Recruitment 2023)ನವಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 15 , 2023 ರ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

(NMPT Recruitment 2023)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ನವಮಂಗಳೂರು ಪೋರ್ಟ್ ಟ್ರಸ್ಟ್
ಹುದ್ದೆಯ ಹೆಸರು : ಸಹಾಯಕ ಮ್ಯಾನೇಜರ್
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ : ಮಂಗಳೂರು
ವೇತನ : 70000 ರೂ. ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ನವಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು CA,ICMA ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ನವಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 30 ವಯಸ್ಸಿನವರಾಗಿರಬೇಕು.

ಅಯ್ಕೆ ಪ್ರಕ್ರಿಯೆ :ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:Reserve Bank of India: ಗ್ರಾಹಕರಿಗೆ ಬಿಗ್ ಶಾಕ್ ನೀಡಿದ ಎಸ್‌ಬಿಐ: ಇಂದಿನಿಂದ ಹೋಮ್‌ ಲೋನ್‌ ಬಡ್ಡಿದರ ಹೆಚ್ಚಳ

ಇದನ್ನೂ ಓದಿ:NCBC Recruitment :ಸ್ನಾತಕೋತ್ತರ ಪದವೀಧರರಿಗೆ ಜೈವಿಕ ವಿಜ್ಞಾನಗಳ ರಾಷ್ಟ್ರೀಯ ಕೇಂದ್ರದಲ್ಲಿ ಉದ್ಯೋಗಾವಕಾಶ

ಅರ್ಜಿ ಸಲ್ಲಿಸುವ ವಿಧಾನ :
ನವಮಂಗಳೂರು ಪೋರ್ಟ್ ಟ್ರಸ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 15-1-2023 ರ ಮೊದಲು ನವಮಂಗಳೂರು ಪೋರ್ಟ್ ಟ್ರಸ್ಟ್ ನ ಅಧಿಕೃತ ವೆಬ್ ಸೈಟ್ ಆದ newmangaloreport.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:12- ಡಿಸೆಂಬರ್ 2022.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15- ಜನವರಿ-2023

NMPT Recruitment 2023 New mangaluru Port Trust invites applications for the post of Assistant Manager

Comments are closed.