(Police Constable Posts)ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವವರಿಗೆ ಇಲ್ಲಿದೆ ಸುವರ್ಣಾವಕಾಶ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಇದೀಗ ನವೆಂಬರ್ 30,2022ರ ವರೆಗೆ ವಿಸ್ತರಣೆ ಮಾಡಲಾಗಿದೆ. ಅರ್ಜಿ ಸಲ್ಲಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
Police Constable Posts: ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP)
ಹುದ್ದೆಯ ಹೆಸರು : ಪೊಲೀಸ್ ಪೇದೆ
ಹುದ್ದೆಗಳ ಸಂಖ್ಯೆ : 3484
ಉದ್ಯೋಗ ಸ್ಥಳ : ಕರ್ನಾಟಕ
ವೇತನ:23500 ರಿಂದ 47650 ರೂ. ಪ್ರತಿ ತಿಂಗಳು
ವಿದ್ಯಾರ್ಹತೆ ವಿವರ:
ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 27 ವರ್ಷ ವಯಸ್ಸಿನವರಾಗಿರಬೇಕು.
ವಯೋಮಿತಿ ಸಡಿಲಿಕೆ:
Cat-2A/2B/3A & 3B ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ:Job Opportunity :10ನೇ ತರಗತಿ, ಐಟಿಐ ಓದುಗರಿಗೆ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗಾವಕಾಶ
ಇದನ್ನೂ ಓದಿ:Job Opportunity:ಪಿಹೆಚ್‌ಡಿ ಪೂರ್ಣಗೊಳಿಸಿದವರಿಗೆ ಇಲ್ಲಿದೆ ಉದ್ಯೋಗಾವಕಾಶ
ಇದನ್ನೂ ಓದಿ:PNB Recruitment 2022: ಪದವೀಧರರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ
ಅರ್ಜಿ ಶುಲ್ಕ:
SC/ST/Cat-I ಅಭ್ಯರ್ಥಿಗಳು: 200 ರೂ.
General, Cat-2A, 2B, 3A ಮತ್ತು 3Bಅಭ್ಯರ್ಥಿಗಳು: 400 ರೂ.
ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 19-9-2022 ರಿಂದ 30-11- 2022 ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯ ಅಧಿಕೃತ ವೆಬ್ ಸೈಟ್ ಆದ ksp.karnataka.gov.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-9-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2022
November 30 is the last day to apply for Police Constable Posts