Police Constable Posts : ಪೊಲೀಸ್‌ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ

(Police Constable Posts)ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವವರಿಗೆ ಇಲ್ಲಿದೆ ಸುವರ್ಣಾವಕಾಶ ಪೊಲೀಸ್‌ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಇದೀಗ ನವೆಂಬರ್ 30,2022ರ ವರೆಗೆ ವಿಸ್ತರಣೆ ಮಾಡಲಾಗಿದೆ. ಅರ್ಜಿ ಸಲ್ಲಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.

Police Constable Posts: ಹುದ್ದೆಯ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಪೊಲೀಸ್ (KSP)
ಹುದ್ದೆಯ ಹೆಸರು : ಪೊಲೀಸ್ ಪೇದೆ
ಹುದ್ದೆಗಳ ಸಂಖ್ಯೆ : 3484
ಉದ್ಯೋಗ ಸ್ಥಳ : ಕರ್ನಾಟಕ
ವೇತನ:23500 ರಿಂದ 47650 ರೂ. ಪ್ರತಿ ತಿಂಗಳು

ವಿದ್ಯಾರ್ಹತೆ ವಿವರ:
ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 10 ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ:
ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ರಿಂದ ಗರಿಷ್ಠ 27 ವರ್ಷ ವಯಸ್ಸಿನವರಾಗಿರಬೇಕು.

ವಯೋಮಿತಿ ಸಡಿಲಿಕೆ:
Cat-2A/2B/3A & 3B ಅಭ್ಯರ್ಥಿಗಳು: 3 ವರ್ಷಗಳು
SC/ST ಅಭ್ಯರ್ಥಿಗಳು: 5 ವರ್ಷಗಳು

ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ:Job Opportunity :10ನೇ ತರಗತಿ, ಐಟಿಐ ಓದುಗರಿಗೆ ಪ್ರತಿಷ್ಠಿತ ಕಂಪನಿಯಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ:Job Opportunity:ಪಿಹೆಚ್‌ಡಿ ಪೂರ್ಣಗೊಳಿಸಿದವರಿಗೆ ಇಲ್ಲಿದೆ ಉದ್ಯೋಗಾವಕಾಶ

ಇದನ್ನೂ ಓದಿ:PNB Recruitment 2022: ಪದವೀಧರರಿಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿದೆ ಉದ್ಯೋಗಾವಕಾಶ

ಅರ್ಜಿ ಶುಲ್ಕ:
SC/ST/Cat-I ಅಭ್ಯರ್ಥಿಗಳು: 200 ರೂ.
General, Cat-2A, 2B, 3A ಮತ್ತು 3Bಅಭ್ಯರ್ಥಿಗಳು: 400 ರೂ.

ಅರ್ಜಿ ಸಲ್ಲಿಸುವ ವಿಧಾನ :
ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್‌ ಐಡಿ, ಮೊಬೈಲ್‌ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) 19-9-2022 ರಿಂದ 30-11- 2022 ರವರೆಗೆ ಕರ್ನಾಟಕ ರಾಜ್ಯ ಪೊಲೀಸ್ (KSP) ಇಲಾಖೆಯ ಅಧಿಕೃತ ವೆಬ್‌ ಸೈಟ್‌ ಆದ ksp.karnataka.gov.in ನಲ್ಲಿ ಆನ್ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 19-9-2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-11-2022

November 30 is the last day to apply for Police Constable Posts

Comments are closed.