ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ (NWKRTC Recruitment 2023) ಮಾರ್ಚ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಸ್ತೆ ಸಾರಿಗೆ ನಿಗಮದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.
NWKRTC ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC)
ಹುದ್ದೆಗಳ ಸಂಖ್ಯೆ : 71 ಹುದ್ದೆಗಳು
ಉದ್ಯೋಗ ಸ್ಥಳ : ಬೆಳಗಾವಿ
ಪೋಸ್ಟ್ ಹೆಸರು : ಅಪ್ರೆಂಟಿಸ್ ಹುದ್ದೆ
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಹುದ್ದೆಯ ವಿವರ :
- ಮೆಕ್ಯಾನಿಕ್ ಡೀಸೆಲ್ : 11 ಹುದ್ದೆಗಳು
- ಮೆಕ್ಯಾನಿಕ್ ಮೋಟಾರ್ ವೆಹಿಕಲ್ : 10 ಹುದ್ದೆಗಳು
- ಎಲೆಕ್ಟ್ರಿಷಿಯನ್ : 12 ಹುದ್ದೆಗಳು
- ಫಿಟ್ಟರ್ : 5 ಹುದ್ದೆಗಳು
- ವೆಲ್ಡರ್ (ಗ್ಯಾಸ್ ಮತ್ತು ಎಲೆಕ್ಟ್ರಿಕ್) : 1 ಹುದ್ದೆ
- ಟರ್ನರ್ : 4 ಹುದ್ದೆಗಳು
- COPA : 28 ಹುದ್ದೆಗಳು
ಶೈಕ್ಷಣಿಕ ಅರ್ಹತೆ :
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITI ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ :
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಪೂರ್ಣಗೊಳಿಸಿರಬೇಕು ಹಾಗೂ ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು : 05 ವರ್ಷಗಳು
ಆಯ್ಕೆ ಪ್ರಕ್ರಿಯೆ :
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
NWKRTC ನೇಮಕಾತಿ (ಅಪ್ರೆಂಟಿಸ್) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು :
ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೊದಲು apprenticeshipindia.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು. ನಂತರ ಅಭ್ಯರ್ಥಿಗಳು ಈ ಕೆಳಗಿನ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಬೆಳಗಾವಿ ಶಾಖೆ ಕಛೇರಿ, ಬೆಳಗಾವಿ, ಕರ್ನಾಟಕ ಮಾರ್ಚ್18, 2023 ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಇದನ್ನೂ ಓದಿ : IPPB ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : ಡಿಸಿಸಿ ಬ್ಯಾಂಕ್ ನೇಮಕಾತಿ 2023 : ವಿವಿಧ ಅಕೌಂಟೆಂಟ್, ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಇದನ್ನೂ ಓದಿ : SBI ನೇಮಕಾತಿ 2023 : ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ : 04 ಮಾರ್ಚ್ 2023
ನೇರ ಸಂದರ್ಶನ ದಿನಾಂಕ : 18 ಮಾರ್ಚ್ 2023
NWKRTC Recruitment 2023 : Direct Interview for Various Apprentice Posts : Apply Immediately