PDO Recruitment 2023 :‌ ಪಿಡಿಒ ಹುದ್ದೆಗಳ ಭರ್ತಿಗೆ ಗ್ರೀನ್‌ ಸಿಗ್ನಲ್ ನೀಡಿದ ರಾಜ್ಯ ಸರಕಾರ

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ (PDO Recruitment 2023 ) ಖಾಲಿ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಸಹಾಯಕರು, ಗ್ರೇಡ್‌ 1, ಗ್ರೇಡ್‌ 2 ಹುದ್ದೆಗಳನ್ನು 3 ರಿಂದ 4 ತಿಂಗಳೊಳಗೆ ಭರ್ತಿ ಮಾಡುವ ಎಲ್ಲಾ ಸಾಧ್ಯತೆ ಇದೆ. ಈ ಕುರಿತು ನೇಮಕಾತಿ ಶೀಘ್ರದಲ್ಲಿ ನಡೆಸಲಾಗುವುದು ಎಂದು ವಿಧಾನ ಪರಿಷತ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದ ಗ್ರಾಮ ಪಂಚಾಯತ್‌ ನೇಮಕಾತಿಯ ಸಂಪೂರ್ಣ ವಿವರ :

ಇಲಾಖೆ ಹೆಸರು : ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿ (PDO)
ಹುದ್ದೆಗಳ ಹೆಸರು : ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಸಹಾಯಕರು, ಗ್ರೇಡ್‌ 1, ಗ್ರೇಡ್‌ 2
ಒಟ್ಟು ಹುದ್ದೆಗಳು : 2000 ಕ್ಕೂ ಅಧಿಕ
ಅರ್ಜಿ ಸಲ್ಲಿಸುವ ವಿಧಾನ : ಶೀಘ್ರದಲ್ಲೇ ತಿಳಿಸುತ್ತೇವೆ

ವಿದ್ಯಾರ್ಹತೆ ವಿವರ :

  • ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಾಸ್‌ ಆಗಿರಬೇಕು.
  • ಕಾರ್ಯದರ್ಶಿ ಗ್ರೇಡ್‌ 1 : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಾಸ್‌ ಆಗಿರಬೇಕು.
  • ಕಾರ್ಯದರ್ಶಿ ಗ್ರೇಡ್‌ 2 : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಾಸ್‌ ಆಗಿರಬೇಕು.

ಆಯ್ಕೆ ವಿಧಾನ :
ಕರ್ನಾಟಕ ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಸುವ ಎಲ್ಲಾ ಹುದ್ದೆಗಳಿಗೂ ಸಹ ಕಡ್ಡಾಯವಾಗಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇರುತ್ತದೆ.

ಆರ್ಥಿಕ ಇಲಾಖೆ ಮುಂದೆ ಪ್ರಸ್ತಾವನೆ :
ಗ್ರಾಮ ಪಂಚಾಯಿತಿಗಳಿಗೆ 30ಕ್ಕೂ ಹೆಚ್ಚು ಇಲಾಖೆಗಳ ಸೇವೆ ಒದಗಿಸುವ ಅಧಿಕಾರ ನೀಡಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 326 ಹುದ್ದೆಗಳ ಭರ್ತಿಗೆ ಅನುಮತಿ ಕೋರಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ಕಾರ್ಯದರ್ಶಿ ಹುದ್ದೆಗಳ ವಿವರ :
487 ಕಾರ್ಯದರ್ಶಿ ಗ್ರೇಡ್‌ 1 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಬಡ್ತಿ ಮೂಲಕ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ.
556 ಕಾರ್ಯದರ್ಶಿ ಗ್ರೇಡ್‌ 2 ಹುದ್ದೆಗಳು ಖಾಲಿ ಇವೆ. ಈ ಪೈಕಿ 343 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಉಳಿದ ಹುದ್ದೆಗಳನ್ನು ಹಾಲಿ ಸಿಬ್ಬಂದಿಗೆ ಬಡತಿ ನೀಡಿ ತುಂಬಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.

ಇದನ್ನೂ ಓದಿ : Bank of Baroda Recruitment 2023 : ಬ್ಯಾಂಕ್ ಆಫ್ ಬರೋಡಾ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : Karnataka Bank Recruitment 2023 : ಕರ್ಣಾಟಕ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : RCUB Recruitment 2023 : ರಾಣಿ ಚನ್ನಮ್ಮ ವಿವಿ ನೇಮಕಾತಿ : ಬೋಧಕೇತರ ಹುದ್ದೆಗೆ ಅರ್ಜಿ ಆಹ್ವಾನ

ಎಸ್‌ಡಿಎ ಹುದ್ದೆಗಳ ವಿವರ :
ಗ್ರಾಮ ಪಂಚಾಯಿತಿಗಳಲ್ಲಿ ಒಟ್ಟು 625ದ್ವಿತೀಯ ದರ್ಜೆ ಹುದ್ದೆಗಳು ಖಾಲಿ ಇವೆ. ಇವುಗಳ ಪೈಕಿ 124 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಒಟ್ಟಾರೆ ಶೇ.90 ಹುದ್ದೆಗಳನ್ನು ಮುಂದಿನ ನಾಲ್ಕು ತಿಂಗಳ ಒಳಗಾಗಿ ಭರ್ತಿ ಮಾಡಲಾಗುತ್ತದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. ಉದ್ಯೋಗಾಂಕ್ಷಿಗಳು ಪರೀಕ್ಷೆಗೆ ಸಿದ್ಧರಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಆಕರಿ (ಪಿಡಿಒ), ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ), ಕಾರ್ಯದರ್ಶಿ ಗ್ರೇಡ್‌ 1, ಕಾರ್ಯದರ್ಶಿ ಗ್ರೇಡ್‌ 2 ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಇರುತ್ತದೆ. ಆದ್ದರಿಂದ ಈ ಉದ್ಯೋಗಗಳ ಆಕಾಂಕ್ಷಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಇಂದಿನಿಂದಲೇ ತಯಾರಿ ನಡೆಸಬೇಕಾಗಿದೆ.

PDO Recruitment 2023: The state government has given green signal for the filling of PDO posts

Comments are closed.