ಭಾರತ ದೇಶದ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕೆಲಸ ಮಾಡಬೇಕೆಂಬ ಕನಸು ಕಾಣುತ್ತಿರುವ ಯುವಕ/ಯುವತಿಯರಿಗೆ ಗುಡ್‌ನ್ಯೂಸ್. ಅದೇನೆಂದರೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ ಪಿಎನ್‌ಬಿ ಒಟ್ಟು 545 ಲೋಕಲ್ ಆಫೀಸರ್‌ಗಳನ್ನು ನೇಮಕ ಮಾಡಿಕೊಳ್ಳಲಿದೆ. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 20 ರಿಂದ ಪ್ರಾರಂಭವಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಆಗಸ್ಟ್ 9ರ ಒಳಗೆ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ತೆರಳಿ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ. ಪಿಎನ್‌ಬಿ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು ಎಂದು ತಿಳಿಯೋಣ.
ವಿದ್ಯಾರ್ಹತೆ
ಪಿಎನ್‌ಬಿ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತ ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಬೇಕು.
ವಯೋಮಿತಿ
ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 30 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ವೇತನ
ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,480 ರಿಂದ 85,920 ರೂ. ವೇತನ ನೀಡಲಾಗುವುದು.
ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಯುಪಿ ಪೊಲೀಸ್ ಪಡೆಯಲ್ಲಿ 81,000 ಹುದ್ದೆಗಳ ಭರ್ತಿಗೆ ಸಿಎಂ ಯೋಗಿ ಗ್ರೀನ್ ಸಿಗ್ನಲ್
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಇದರಲ್ಲಿ ಎಸ್‌ಸಿ, ಎಸ್‌ಟಿ ಮತ್ತು ದಿವ್ಯಾಂಗ ಅಭ್ಯರ್ಥಿಗಳಿಗೆ 59 ರೂ. ಹಾಗೂ ಮೀಸಲಾತಿಯಿಲ್ಲದ ವರ್ಗದ ಅಭ್ಯರ್ಥಿಗಳಿಗೆ 1,180 ರೂ. ಶುಲ್ಕ ಪಾವತಿಸಬೇಕು.
ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ.
ಆಯ್ಕೆ ಹೇಗೆ?
ಈ ನೇಮಕಾತಿಯಲ್ಲಿ ಒಟ್ಟು ಮೂರು ರೀತಿಯ ಪರೀಕ್ಷೆಗಳನ್ನು ಎದುರಿಸಬೇಕಾಗುತ್ತದೆ. ಲಿಖಿತ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಹಾಗೂ ಸಂದರ್ಶನ.
ಪಿಎನ್‌ಬಿ ಲೋಕಲ್ ಬ್ಯಾಂಕ್ ಆಫೀಸರ್ ನೇಮಕಾತಿಯಲ್ಲಿ ಒಟ್ಟು 545 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಇದರಲ್ಲಿ ಹುದ್ದೆಗಳನ್ನು ರಾಜ್ಯವಾರು ಹಂಚಿಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಖಾಲಿ ಇರುವ 78 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
