10ನೇ ತರಗತಿ, ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ : ವೇತನ 57,000 ರೂ., ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಅಂಚೆ ಸೇವೆಯ ಮಹಾರಾಷ್ಟ್ರ ವಲಯ ಖಾಲಿಯಿರುವ 1371 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. 1,029 ಹುದ್ದೆಗಳು ಪೋಸ್ಟ್ ಮ್ಯಾನ್, 295 ಹುದ್ದೆಗಳು ಸಬ್ ಆರ್ಡಿನೇಟ್ ಆಫೀಸ್ ನಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್), 32 ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) ಮತ್ತು ಉಳಿದ 15 ಸ್ಥಾನಗಳು ಮೇಲ್ ಗಾರ್ಡ್ ಹುದ್ದೆಗಳಿಗೆ ಮೀಸಲಿರಿಸಲಾಗಿದೆ.

ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಪೋಸ್ಟ್ ಮ್ಯಾನ್ ಮತ್ತು ಮೇಲ್ ಗಾರ್ಡ್ ಹುದ್ದೆಗಳಿಗೆ ಕಂಪ್ಯೂಟರ್ ಮತ್ತು ಸ್ಥಳೀಯ ಭಾಷೆಯ ಜ್ಞಾನ ಹೊಂದಿರಬೇಕು. ಆದರೆ, ಆಡಳಿತಾತ್ಮಕ ಮತ್ತು ಸಬ್ ಆರ್ಡಿನೇಟ್ ಕಚೇರಿಯಲ್ಲಿ ಎಂಟಿಎಸ್ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ಪಾಸ್ ಆಗಿರಬೇಕು. ಅಲ್ಲದೇ ಸ್ಥಳೀಯರ ತಿಳಿವಳಿಕೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಅಂಚೆ ಕಚೇರಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮೇಲೆ ನೀಡಲಾಗಿರುವ ಲಿಂಕ್ ಅಥವಾ ಮಹಾರಾಷ್ಟ್ರ ವಲಯದ ಅಧಿಕೃತ ವೆಬ್ಸೈಟ್ : https://dopmah20.onlineapplicationform.org/MHPOST/ನಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೇ ಅಭ್ಯರ್ಥಿಗಳು ಪರೀಕ್ಷೆಯ ಹಾಲ್ ಟಿಕೆಟ್ ಗಳನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.

ಅಂಚೆ ಇಲಾಖೆ ಅರ್ಜಿ ಆಹ್ವಾನಿಸಲಾಗಿರುವ ಎಲ್ಲಾ ಹುದ್ದೆಗಳಿಗೆ ಕನಿಷ್ಠ 18 ವರ್ಷ ವಯಸ್ಸನ್ನು ನಿಗದಿಪಡಿಸಲಾಗಿದೆ. ಪೋಸ್ಟ್ ಮ್ಯಾನ್ ಮತ್ತು ಮೇಲ್ ಗಾರ್ಡ್ ಖಾಲಿ ಹುದ್ದೆಗಳ ಗರಿಷ್ಠ ವಯೋಮಿತಿ 27 ವರ್ಷಗಳು. ಎಂಟಿಎಸ್ಗೆ 25 ವರ್ಷ ನಿಗದಿಪಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಸಾಮಾನ್ಯ/ ಇಡಬ್ಲ್ಯೂಎಸ್ / ಒಬಿಸಿ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಮಹಿಳಾ ಅಭ್ಯರ್ಥಿಗಳು ಮತ್ತು ಎಸ್ಸಿ / ಎಸ್ಟಿ / ಪಿಡಬ್ಲ್ಯುಡಿ ವಿಭಾಗಕ್ಕೆ ಸೇರಿದ ಅಭ್ಯರ್ಥಿಗಳು 100 ರೂ. ಶುಲ್ಕವಿದೆ.

ಪೋಸ್ಟ್ ಮ್ಯಾನ್, ಎಂಟಿಎಸ್ ಮತ್ತು ಮೇಲ್ ಗಾರ್ಡ್ ಹುದ್ದೆಗಳ ಆಯ್ಕೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಯಲಿದೆ. ಪೋಸ್ಟ್ ಮ್ಯಾನ್ ಅಥವಾ ಮೇಲ್ ಗಾರ್ಡ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು 21,700- 69,100 ರೂ. ನಡುವೆ ವೇತನ ದೊರೆಯುತ್ತದೆ. ಆದರೆ ಮಲ್ಟಿ ಟಾಸ್ಕಿಂಗ್ ಹುದ್ದೆಗೆ ಆಯ್ಕೆಯಾದವರಿಗೆ 18,000-56,9 ರೂ. ಸಂಬಳ ಸಿಗಲಿದೆ.

Comments are closed.