ಭಾರತೀಯ ಅಂಚೆ ಇಲಾಖೆಯಲ್ಲಿ (Post Office Recruitment 2023) ಖಾಲಿ ಇರುವ 40,889 ಪೋಸ್ಟ್‌ಮ್ಯಾನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಖಾಲಿ ಇರುವ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ
ಪೋಸ್ಟ್‌ಗಳ ಸಂಖ್ಯೆ : 40,889 ಹುದ್ದೆಗಳು
ಹುದ್ದೆಯ ಹೆಸರು : ಪೋಸ್ಟ್‌ಮ್ಯಾನ್, ಮೇಲ್ಗಾರ್ಡ್ ಹಾಗೂ ಎಂಟಿಎಸ್
ಉದ್ಯೋಗ ಸ್ಥಳ : ಭಾರತದಾದ್ಯಂತ
ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಅರ್ಹತೆಯ ಮಾನದಂಡ :
- ಪೋಸ್ಟ್‌ಮ್ಯಾನ್ : ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ / 12 ನೇ ತೇರ್ಗಡೆಯಾಗಿರಬೇಕು.
- ಮೇಲ್ಗಾರ್ಡ್ : ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ / 12 ನೇ ತೇರ್ಗಡೆಯಾಗಿರಬೇಕು. ಕಂಪ್ಯೂಟರ್‌ನಲ್ಲಿ ಸಾಮಾನ್ಯ ಜ್ಞಾನವನ್ನು ಹೊಂದಿರಬೇಕು.
- ಎಂಟಿಎಸ್ – ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ / 12 ನೇ ತೇರ್ಗಡೆಯಾಗಿರಬೇಕು. ಕಂಪ್ಯೂಟರ್‌ನಲ್ಲಿ ಸಾಮಾನ್ಯ ಜ್ಞಾನವನ್ನು ಹೊಂದಿರಬೇಕು.
- ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕು. ಇತರ ವಿಧಾನಗಳಲ್ಲಿ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಸಂಬಳ ವಿವರ :
ಬ್ರಾಂಚ್ ಪೋಸ್ಟ್ ಮಾಸ್ಟರ್ : ರೂ. 12,000-29,380/-
ಸಹಾಯಕ ಬ್ರಾಂಚ್ ಪೋಸ್ಟ್ ಮಾಸ್ಟರ್ : ರೂ. 10,000-24,470/-
ಪೋಸ್ಟ್ ಮ್ಯಾನ್ : ರೂ. 10,000-24,470/-
ವಯಸ್ಸಿನ ಮಿತಿ:
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಟ 18 ವರ್ಷ ವಯಸ್ಸಿನವರಾಗಿರಬೇಕು. ಗರಿಷ್ಠ 40 ವರ್ಷಗಳನ್ನು ಮೀರಬಾರದು.
ವಯೋಮಿತಿ ಸಡಿಲಿಕೆ :
ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಪ್ರಕಾರ SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು PWD ಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ನಂತರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಮೂಲ ದಾಖಲೆಗಳ ಪರಿಶೀಲನೆಯ ನಂತರ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಭಾರತೀಯ ಅಂಚೆ ಇಲಾಖೆಯ ನೇಮಕಾತಿಯ ಪ್ರಕಾರ, ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗಿದೆ.
ಪ್ರಮುಖ ದಿನಾಂಕ :
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 16-02-2023
ಭಾರತೀಯ ಪೋಸ್ಟ್ ಆಫೀಸ್ ನೇಮಕಾತಿಗೆ ಅರ್ಜಿ ಸಲ್ಲಿಸಲುವ ವಿಧಾನ :
ಪೋಸ್ಟ್ ಆಫೀಸ್ ನೇಮಕಾತಿ 2023 ಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಕೆಳಗೆ ನೀಡಲಾದ ಸೂಚನೆಗಳನ್ನು ಅನುಸರಿಸಬೇಕು. ಹಾಗೆ ಮಾಡುವ ಮೂಲಕ, ಯಾವುದೇ ಅರ್ಜಿದಾರರು ತಮ್ಮ ಅರ್ಜಿಯನ್ನು ಸುಲಭವಾಗಿ ಪೂರ್ಣಗೊಳಿಸಬಹುದು.
- ಅಭ್ಯರ್ಥಿಳು ಇಂಡಿಯಾ ಪೋಸ್ಟ್ ಅಧಿಕೃತ ವೆಬ್‌ಸೈಟ್ ಆದ www.indiapost.gov.in ಗೆ ಹೋಗಿ ಮತ್ತು ಮುಖಪುಟದಲ್ಲಿ, ಮೇಲಿನ ಬಲ ಮೂಲೆಯಲ್ಲಿರುವ ಮೆನು ಮೇಲೆ ಕ್ಲಿಕ್ ಮಾಡಬೇಕು. ಮುಂದೆ, ಅಧಿಸೂಚನೆಗಳ ವಿಭಾಗದ ಮೇಲೆ ಕ್ಲಿಕ್ ಮಾಡಬೇಕು.
- ನಿಮ್ಮ ಮೊಬೈಲ್ ಫೋನ್ ಅಥವಾ ಪಿಸಿಯಲ್ಲಿ ಅಧಿಸೂಚನೆಯನ್ನು ಪ್ರದರ್ಶಿಸಿದ ನಂತರ, ಅದನ್ನು ಸಂಪೂರ್ಣವಾಗಿ ಓದಿದ ನಂತರ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
- ಒಮ್ಮೆ ನೀವು ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಿದರೆ, ನಿಮ್ಮ ಮೊಬೈಲ್ ವೆಬ್ ಬ್ರೌಸರ್‌ನಲ್ಲಿ ಹೊಸ ಪುಟಕ್ಕೆ ನಿಮ್ಮನ್ನು ಕರೆದೊಯ್ಯಲಾಗುತ್ತದೆ; ಅರ್ಜಿದಾರರು ಈಗ ಅವನ ಅಥವಾ ಅವಳ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಬೇಕು.
- ಅಭ್ಯರ್ಥಿಯು ಈಗ ಅರ್ಜಿ ನಮೂನೆಯಲ್ಲಿ ವಿನಂತಿಸಿದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಪೂರ್ಣಗೊಳಿಸಬೇಕು ಮತ್ತು ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಬೇಕು. ಈಗ ಪೋಸ್ಟ್ ಆಫೀಸ್ ನೇಮಕಾತಿ 2023 ಗಾಗಿ ನಿಮ್ಮ ಅರ್ಜಿಯನ್ನು ಈಗ ಸಲ್ಲಿಸಲಾಗಿದೆ.
ಇದನ್ನೂ ಓದಿ : ಆದಾಯ ತೆರಿಗೆ ಇಲಾಖೆ ನೇಮಕಾತಿ 2023 : ತೆರಿಗೆ ಸಹಾಯಕ, ಇನ್ಸ್ಪೆಕ್ಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : ಕೃಷಿ ಇಲಾಖೆ ಹೊಸ ನೇಮಕಾತಿ 2023 : ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ
ಇದನ್ನೂ ಓದಿ : ಅಬಕಾರಿ ಇಲಾಖೆ ನೇಮಕಾತಿ 2023 : ಕಾನ್ಸ್ಟೇಬಲ್, ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ : https://indiapostgdsonline.gov.in
Post Office Recruitment 2023 : SSLC Passed Jobs in Postal Department