Postal Department Recruitment 2022: ಅಂಚೆ ಇಲಾಖೆಯಲ್ಲಿ ದ್ವಿತೀಯ ಪಿಯು ಮುಗಿಸಿದವರಿಗೆ ಉದ್ಯೋಗಾವಕಾಶ; 35 ಸಾವಿರ ಸಂಬಳ

ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಶುಭ ಸುದ್ದಿಯೊಂದನ್ನು (Postal Department Recruitment 2022) ನೀಡಿದೆ. ಅಂಚೆ ಇಲಾಖೆಯ ಅಂಚೆ ಸಹಾಯಕ (ಪೋಸ್ಟಲ್ ಅಸಿಸ್ಟೆಂಟ್) ಹಾಗೂ ಸಾರ್ಟಿಂಗ್ ಅಸಿಸ್ಟೆಂಟ್ ಸೇರಿದಂತೆ ಕೇಂದ್ರ ಸರಕಾರದ ವಿವಿಧ ಇಲಾಖೆಗಳಲ್ಲಿ ಗ್ರೂಪ್-ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗ (SSC) ಅಖಿಲ ಭಾರತ ಮಟ್ಟದ ನೇರ ನೇಮಕಾತಿ ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಅಂಚೆ ಇಲಾಖೆ ಮಾಹಿತಿ ನೀಡಿದೆ.

ಪರೀಕ್ಷೆಯ ಹೆಸರು:- ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ 2021.

ವೇತನ: ಪ್ರತಿ ತಿಂಗಳಿಗೆ 35 ಸಾವಿರ ಮತ್ತು ಶೇಕಡಾ 3 ವಾರ್ಷಿಕ ಇಂಕ್ರಿಮೆಂಟ್ ಹಾಗೂ ಇತರ ಭತ್ಯೆಗಳು ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ದೊರೆಯಲಿವೆ.

ವಯೋಮಿತಿ: ಕನಿಷ್ಠ 18 ವರ್ಷಗಳು, ಗರಿಷ್ಠ 27 ವರ್ಷಗಳು, ಇತರ ವರ್ಗಗಳಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ದ್ವಿತೀಯ ಪಿಯುಸಿ ಪಾಸಾದವರು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಂಚೆ ಇಲಾಖೆಯು ಮಾಹಿತಿ ನೀಡಿದೆ.

ಹೇಗೆ ಅರ್ಜಿ ಸಲ್ಲಿಸಬಹುದು?

ಅರ್ಜಿ ಸಲ್ಲಿಸುವ ಅವಧಿ ಆರಂಭದ ದಿನ: 1/02/ 2022.
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 7/03/2022.
ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಸಲ್ಲಿಕೆಗೆ ಈ ಕೆಳಗಿನ ಲಿಂಕ್ ಅನ್ನು ಬಳಸಿ.
https://ssc.nic.in/.
ಅಧಿಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ:
https://ssc.nic.in/SSCFileServer/PortalManagement/UploadedFiles/Notice_chsl_01022022.pdf

ಇದನ್ನೂ ಓದಿ: Term Life Insurance Plans: ಟರ್ಮ್ ಇನ್ಶೂರೆನ್ಸ್ ಯೋಜನೆ ಪ್ರಾರಂಭಿಸಲು ನೀವು ತಿಳಿದಿರಬೇಕಾದ ಅತ್ಯಗತ್ಯ ಮಾಹಿತಿಗಳು: ಭಾಗ 1

ಇದನ್ನೂ ಓದಿ: Term Life Insurance Plans: ಟರ್ಮ್ ಇನ್ಶೂರೆನ್ಸ್ ಯೋಜನೆ ಪ್ರಾರಂಭಿಸಲು ನೀವು ತಿಳಿದಿರಬೇಕಾದ ಅತ್ಯಗತ್ಯ ಮಾಹಿತಿಗಳು: ಭಾಗ 2

ಇದನ್ನೂ ಓದಿ: Term Life Insurance Plans: ಟರ್ಮ್ ಇನ್ಶೂರೆನ್ಸ್ ಯೋಜನೆ ಪ್ರಾರಂಭಿಸಲು ನೀವು ತಿಳಿದಿರಬೇಕಾದ ಅತ್ಯಗತ್ಯ ಮಾಹಿತಿಗಳು: ಭಾಗ 3

(Postal Department Recruitment 2022 central government call for Postal Assistant posts)

Comments are closed.