ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದ್ದಕ್ಕೆ ಕರವೇ ಆಕ್ರೋಶ : ರೈಲ್ವೇ ಪರೀಕ್ಷೆಯೇ ರದ್ದು!
ಭಾರತೀಯ ರೈಲ್ವೆ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ರಾಜ್ಯದ ಮೂರು ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಿದ್ದಾರೆ. ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ ಪರೀಕ್ಷೆಯನ್ನೇ ರದ್ದುಗೊಳಿಸಿದೆ.
ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕೈಬಿಟ್ಟು ಕೇವಲ ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದ ಭಾರತೀಯ ರೈಲ್ವೆ ಇಲಾಖೆಯ ವಿರುದ್ಧ ಕರವೇ ಕಾರ್ಯಕರ್ತರು ಆಕ್ರೋಶ ಪ್ರದರ್ಶಿಸಿದ್ದಾರೆ. ಭಾರತೀಯ ರೈಲ್ವೆ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ರಾಜ್ಯದ ಮೂರು ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಿದ್ದಾರೆ. ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ ಪರೀಕ್ಷೆಯನ್ನೇ ರದ್ದುಗೊಳಿಸಿದೆ.
ಮುಂಬಡ್ತಿ ಪರೀಕ್ಷೆ ರದ್ದುಗೊಂಡ ಹಿನ್ನೆಲೆಯಲ್ಲಿ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಂದ ಅರ್ಧಕ್ಕೆ ವಾಪಸ್ಸಾಗಿದ್ದಾರೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ರೈಲ್ವೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಮ್ಮ ಹೋರಾಟ ಇಲ್ಲಿಗೇ ನಿಲ್ಲದು ಎಂದಿರುವ ಕರವೇ ಕಾರ್ಯಕರ್ತರು, ದೆಹಲಿ ಭೇಟಿಗೂ ನಿರ್ಧರಿಸಿದ್ದಾರೆ. ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡುವಂತೆ ಆಗ್ರಹಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವರನ್ನು ಭೇಟಿ ಮಾಡಿ ಮನವಿ ಮಾಡುವುದಾಗಿ ಹೇಳಿದೆ.
ಇದನ್ನೂ ಓದಿ: ರೈಲ್ವೆ ನೇಮಕಾತಿಯಿಂದ ಅತಿದೊಡ್ಡ ಘೋಷಣೆ: 11,127 ಅಸಿಸ್ಟಂಟ್ ಲೊಕೊ ಪೈಲಟ್ ಹುದ್ದೆಗಳ ಭರ್ತಿ, ಈ ದಿನಾಂಕಗಳನ್ನು ಗಮನಿಸಿ
ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ರೈಲ್ವೆ ಇಲಾಖೆಯಲ್ಲಿ ಕನ್ನಡ ಭಾಷೆಗೆ ಅವಕಾಶ ನೀಡದೇ, ಇದೀಗ ದಿಢೀರ್ ಪರೀಕ್ಷೆ ರದ್ದುಗೊಳಿಸುವ ಮೂಲಕ ರೈಲ್ವೆ ಇಲಾಖೆ ತಪ್ಪು ಮಾಡಿದೆ. ಇದು ಕನ್ನಡಿಗ ಉದ್ಯೋಗಿಗಳಿಗೆ ಆಗಿರುವ ಅನ್ಯಾಯವಾಗಿದೆ. ಈ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಿ ನ್ಯಾಯ ನೀಡಬೇಕು ಎಂದು ಆಗ್ರಹಿಸಿದ್ದಾರೆ.



