ಆರ್‌ಬಿಐನಲ್ಲಿ ಜೂನಿಯರ್‌ ಎಂಜಿನಿಯರ್‌ ಹುದ್ದೆಗೆ ಅರ್ಜಿ ಆಹ್ವಾನ: ಪರೀಕ್ಷೆ ದಿನಾಂಕ ಜೂನ್‌ 6

ಭಾರತದ ಬ್ಯಾಂಕಿಂಗ್‌ ಕ್ಷೇತ್ರದ ಅತ್ಯುನ್ನತ ಬ್ಯಾಂಕ್‌ ಆದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಜೂನಿಯರ್‌ ಇಂಜಿನಿಯರ್‌ ಹುದ್ದೆಗಳಿಗೆ ಅಧಿಕೃತ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಈ ನೇಮಕಾತಿಯ ಮೂಲಕ ಯುವಕರು ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಬೇಕೆಂಬ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ. ಆರ್‌ಬಿಐ ಜೂನಿಯರ್‌ ಇಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಮೇ 6 ಒಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳಗೆ ಇರಬೇಕಾದ ಅರ್ಹತೆಗಳೇನು ಎಂದು ನೋಡೋಣ.

ಯಾರು ಅರ್ಜಿ ಸಲ್ಲಿಸಬಹುದು

ಜೂನಿಯರ್‌ ಇಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಿವಿಲ್‌ ಇಂಜಿನಿಯರಿಂಗ್‌ ಅಥವಾ ಇಲೆಕ್ಟ್ರಿಕಲ್ ಇಂಜಿನಿಯರಿಂಗ್‌ ನಲ್ಲಿ ಮೂರು ವರ್ಷದ ಡಿಪ್ಲೋಮಾ ಪೂರೈಸಿರಬೇಕು.

ವಯೋಮಿತಿ

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 30 ವರ್ಷಗಳಾಗಿದೆ. ಮೀಸಲು ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯಸ್ಸಿನಲ್ಲಿ ಸಡಿಲಿಕೆಯಿರುತ್ತದೆ.

ಪರೀಕ್ಷೆ ಹೇಗಿರುತ್ತದೆ

ಆರ್‌ಬಿಐ ಈ ನೇಮಕಾತಿಗಾಗಿ ನಡೆಸುವ ಪರೀಕ್ಷೆಯ ದಿನಾಂಕವನ್ನು ಕೂಡಾ ಪ್ರಕಟಿಸಿದೆ. ಪರೀಕ್ಷೆಯು ಜೂನ್‌ 6, 2026 ರಂದು ನಡೆಯಲಿದೆ. ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಇಂಗ್ಲಿಷ್‌, ಎಂಜಿನಿಯರಿಂಗ್‌ ವಿಷಯಗಳು ಮತ್ತು ಕೌಶಲ್ಯ ಸೇರಿ 180 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಒಟ್ಟು 300 ಅಂಕಗಳ ಪರೀಕ್ಷೆಗೆ 150 ನಿಮಿಷಗಳ ಕಾಲ ನೀಡಲಾಗುತ್ತದೆ.

ಇದನ್ನೂ ಓದಿ: ಸಿಆರ್‌ಪಿಎಫ್‌ನಿಂದ ತಿದೊಡ್ಡ ನೇಮಕಾತಿ ಘೋಷಣೆ: 9175 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಈ ದಿನದಿಂದ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ?

ಆರ್‌ಬಿಐನ ಈ ನೇಮಕಾತಿಗೆ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈ ಕೇಳಗಿನ ಹಂತಗಳನ್ನು ಅನುಸರಿಸಿ ಸುಲಭವಾಗಿ ಅರ್ಜಿ ಸಲ್ಲಿಸಬಹುದಾಗಿದೆ.

* ಮೊದಲಿಗೆ ಅಭ್ಯರ್ಥಿಗಳು ಆರ್‌ಬಿಐನ ಅಧಿಕೃತ ವೆಬ್‌ಸೈಟ್‌ rbi.org.in ಗೆ ಭೆಟಿ ನೀಡಬೇಕು.

* ವೆಬ್‌ಸೈಟ್‌ನ ಮುಖಪುಟದಲ್ಲಿರುವ ಆನ್‌ಲೈನ್ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ.

*ಇದಾದನಂತರ, ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ನಮೂದಿಸಿ.

* ಈಗ ಅಗತ್ಯವಿರುವ ದಾಖಲೆಗಳ ಸ್ಕ್ಯಾನ್ ಮಾಡಿ, ಅದನ್ನು ಅಪ್‌ಲೋಡ್ ಮಾಡಿ.

* ಬಳಿಕ ಅರ್ಜಿಯನ್ನು ಇನ್ನೊಮ್ಮೆ ಪರಿಶೀಲಿಸಿ ಸಲ್ಲಿಸಿ. ನಂತರ ಅದರ ಪ್ರಿಂಟ್‌ಔಟ್‌ ಅನ್ನು ತೆಗೆದುಕೊಳ್ಳಿ.

 

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories