RCUB Recruitment 2023 : ರಾಣಿ ಚನ್ನಮ್ಮ ವಿವಿ ನೇಮಕಾತಿ : ಬೋಧಕೇತರ ಹುದ್ದೆಗೆ ಅರ್ಜಿ ಆಹ್ವಾನ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (RCUB Recruitment 2023 )ಯು ಅಧಿಕೃತ ಅಧಿಸೂಚನೆ ಫೆಬ್ರವರಿ 2023 ರ ಮೂಲಕ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಅಧಿಸೂಚನೆ ಸಂಪೂರ್ಣ ವಿವರ :
ವಿಶ್ವವಿದ್ಯಾಲಯದ ಹೆಸರು : ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ (RCUB)
ಪೋಸ್ಟ್‌ಗಳ ಸಂಖ್ಯೆ : 6 ಹುದ್ದೆಗಳು
ಉದ್ಯೋಗ ಸ್ಥಳ : ಬೆಳಗಾವಿ
ಹುದ್ದೆಯ ಹೆಸರು : ಬೋಧಕೇತರ

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಉಪಕುಲಸಚಿವರು : 1 ಹುದ್ದೆ
ಸಹಾಯಕ ಕುಲಸಚಿವರು : 2 ಹುದ್ದೆಗಳು
ಕಛೇರಿ ಅಧೀಕ್ಷಕರು : 3 ಹುದ್ದೆಗಳು

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿದ್ಯಾರ್ಹತೆ ವಿವರ :

  • ಯಾವುದೇ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಶೇ.೫೫ ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ಉಪಕುಲಸಚಿವರು ಹುದ್ದೆಗೆ ಕನಿಷ್ಠ 10 ವರ್ಷ ಆಡಳಿತಾತ್ಮಕ ಕಾರ್ಯಾನುಭವ ಅಥವಾ ಭೋಧನಾ ಅನುಭವ ಹೊಂದಿರಬೇಕು.
  • ಸಹಾಯಕ ಕುಲಸಚಿವರು ಹುದ್ದೆಗೆ ಕನಿಷ್ಠ 5 ವರ್ಷ ಆಡಳಿತಾತ್ಮಕ ಅನುಭವ ಹೊಂದಿರಬೇಕು.
  • ಕಛೇರಿ ಅಧೀಕ್ಷಕರು ಹುದ್ದೆಗೆ ಸ್ನಾತಕೋತ್ತರ ಪದವಿ ಜತೆಗೆ ಕನಿಷ್ಠ 3 ವರ್ಷ ಕಛೇರಿ ಮೇಲ್ವಿಚಾರಣಾ ಸೇವೆ ಅನುಭವವನ್ನು ಹೊಂದಿರಬೇಕು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವೇತನ ಶ್ರೇಣಿ ವಿವರ :

  • ಉಪಕುಲಸಚಿವರು : ರೂ. 67550 – 104600
  • ಸಹಾಯಕ ಕುಲಸಚಿವರು : ರೂ. 52650 – 97100
  • ಕಛೇರಿ ಅಧೀಕ್ಷಕರು : ರೂ. 43100 – 83900

ಅರ್ಜಿ ಶುಲ್ಕ :
ಎಸ್‌ಸಿ/ಎಸ್‌ಟಿ/ಪ್ರವರ್ಗ-I ಅಭ್ಯರ್ಥಿಗಳಿಗೆ : ರೂ.500/-
ಸಾಮಾನ್ಯ ಅಭ್ಯರ್ಥಿಗಳಿಗೆ : ರೂ.1000/-

ಪಾವತಿ ವಿಧಾನ:
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಾಗಿದೆ.

ಆಯ್ಕೆ ಪ್ರಕ್ರಿಯೆ :
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಅಧಿಸೂಚನೆ ಪ್ರಕಾರ, ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ ಅಧಿಸೂಚನೆ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಉಪಕುಲಪತಿಗಳು, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಭೂತರಾಮನಹಟ್ಟಿ, ಬೆಳಗಾವಿ-591156 ಇವರಿಗೆ ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಯ ಮೂಲಕ ಮಾರ್ಚ್‌ 02,2023 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : DC Office Bengaluru Urban Recruitment 2023 : ಬೆಂಗಳೂರು ಜಿಲ್ಲಾಧಿಕಾರಿ ಕಚೇರಿ ನೇಮಕಾತಿ : ಲೋಡರ್, ಕ್ಲೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : HMT Machine Tools Limited Recruitment 2023 : ಡಿಪ್ಲೊಮಾ, ಪದವಿಧರರಿಗೆ ಅಪ್ರೆಂಟಿಸ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಕ್ಯಾನ್‌ ಬ್ಯಾಂಕ್ ನೇಮಕಾತಿ 2023 : ಜೂನಿಯರ್ ಆಫೀಸರ್, ಲೀಗಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10 ಫೆಬ್ರವರಿ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02 ಮಾರ್ಚ್ 2023

RCUB Recruitment 2023 : Rani Channamma V.V Recruitment : Application Invitation for Non-Teaching Posts

Comments are closed.