ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನೇಮಕಾತಿ (Recruitment 2023) ವತಿಯಿಂದ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ಜಿಲ್ಲೆಯ ನಗರಸಭೆ ವ್ಯಾಪ್ತಿಯಲ್ಲಿ ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ 1 ರಂತೆ ನಗರ ಪುನರ್ವಸತಿ ಕಾರ್ಯಕರ್ತರ (ಯು.ಆರ್.ಡಬ್ಲ್ಯೂ) ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 01 ರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ನೇಮಕಾತಿಗಾಗಿ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ವಿವರ :
ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ/ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ ನೀಡಲ್ಪಟ್ಟಿರುವ ವಿಕಲಚೇತನರ ವಿಶಿಷ್ಟ ಗುರುತುಚೀಟಿ ಮತ್ತು ವೈದ್ಯಕೀಯ ಪ್ರಮಾಣ ಪತ್ರ ಹೊಂದಿರುವ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿಗೆ ಕಳುಹಿಸಬೇಕಾಗಿದೆ.
ಇದನ್ನೂ ಓದಿ : India Post Recruitment 2023 : 8 ನೇ ತರಗತಿ ಪಾಸಾದವರಿಗೆ ಭಾರತೀಯ ಅಂಚೆ ಕಚೇರಿಯಲ್ಲಿ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಇದನ್ನೂ ಓದಿ : KARTET 2023 : ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನೋಂದಣಿ ಪ್ರಾರಂಭ : ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574810, 2574811 ಅಥವಾ ಆಯಾ ತಾಲೂಕು ಪಂಚಾಯತ್ನಲ್ಲಿರುವ ಎಂ.ಆರ್.ಡಬ್ಲ್ಯೂ (ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರು) ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Recruitment 2023: Udupi: Invitation to apply for the post of urban, rural rehabilitation workers