RGUHS ನೇಮಕಾತಿ 2023 : ವಿವಿಧ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ (RGUHS Recruitment 2023) ಏಪ್ರಿಲ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಜೂನಿಯರ್ ಅಸಿಸ್ಟೆಂಟ್, ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

RGUHS Recruitment 2023 : ಆರ್‌ಜಿಯುಹೆಚ್‌ಎಸ್‌ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ವಿಶ್ವವಿದ್ಯಾಲಯದ ಹೆಸರು : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ (RGUHS)
ಹುದ್ದೆಗಳ ಸಂಖ್ಯೆ : 88 ಹುದ್ದೆಗಳು
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಕಿರಿಯ ಸಹಾಯಕ, ಸಹಾಯಕ
ವೇತನ : ರೂ.21400-83900/- ಪ್ರತಿ ತಿಂಗಳು

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ಜೂನಿಯರ್ ಪ್ರೋಗ್ರಾಮರ್ (ಗುಂಪು-ಬಿ) : 10 ಹುದ್ದೆಗಳು
ಸಹಾಯಕ ಇಂಜಿನಿಯರ್ (ಸಿವಿಲ್) (ಗುಂಪು-ಬಿ) : 1 ಹುದ್ದೆ
ಸಹಾಯಕ ಗ್ರಂಥಪಾಲಕ (ಗುಂಪು-C) : 1 ಹುದ್ದೆ
ಸಹಾಯಕ (ಗುಂಪು-C) : 27 ಹುದ್ದೆ
ಕಿರಿಯ ಸಹಾಯಕ (ಗುಂಪು-C) : 49 ಹುದ್ದೆ

ಶೈಕ್ಷಣಿಕ ಅರ್ಹತೆ :
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ RGUHS ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.

ವಯಸ್ಸಿನ ಮಿತಿ :
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು RGUHS ನಿಯಮಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಸಂಬಳ (ತಿಂಗಳಿಗೆ) ವಿವರ :

  • ಜೂನಿಯರ್ ಪ್ರೋಗ್ರಾಮರ್ (ಗುಂಪು-ಬಿ) : ರೂ.43100-83900/-
  • ಸಹಾಯಕ ಇಂಜಿನಿಯರ್ (ಸಿವಿಲ್) (ಗುಂಪು-ಬಿ) : ರೂ.43100-83900/-
  • ಸಹಾಯಕ ಗ್ರಂಥಪಾಲಕ (ಗುಂಪು-C) : ರೂ.30350-58250/-
  • ಸಹಾಯಕ (ಗುಂಪು-C) : ರೂ.37900-70850/-
  • ಕಿರಿಯ ಸಹಾಯಕ (ಗುಂಪು-C) : ರೂ.21400-42000/-

ಇದನ್ನೂ ಓದಿ : MSIL ನೇಮಕಾತಿ 2023 : ವಿವಿಧ ವ್ಯವಸ್ಥಾಪಕ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ನಿಮ್ಹಾನ್ಸ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ, ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 17 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17 ಮೇ 2023
ಇ-ಪೋಸ್ಟ್ ಆಫೀಸ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20 ಮೇ 2023

RGUHS Recruitment 2023 : Application Invitation for Various Junior Assistant Posts

Comments are closed.