ರೈಲ್ವೆ ನೇಮಕಾತಿಯಿಂದ ಶಾರ್ಟ್ ನೋಟಿಫಿಕೇಷನ್ ಪ್ರಕಟ: 368 ಸೆಕ್ಷನ್ ಕಂಟ್ರೋಲರ್ ಹುದ್ದೆಗೆ ಅರ್ಜಿ ಸಲ್ಲಿಸಲು ರೆಡಿಯಾಗಿ
RRB Section Controller 2025: ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಬೇಕೆಂಬ ಕನಸು ಕಾಣುತ್ತಿರುವ ಲಕ್ಷಾಂತರ ಯುವಕರ ಕನಸು ನನಸಾಗುವ ಕಾಲ ಬಂದಿದೆ.
ರೈಲ್ವೆ ನೇಮಕಾತಿ ಮಂಡಳಿಯು 368 ಸೆಕ್ಷನ್ ಕಂಟ್ರೋಲರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಲುವಾಗಿ ಶಾರ್ಟ್ ನೋಟಿಫಿಕೇಷನ್ ಅನ್ನು ಪ್ರಕಟಿಸಿದೆ.
ರೈಲ್ವೆ ಇಲಾಖೆಯ ಈ ಅಧಿಸೂಚನೆಯ ಪ್ರಕಾರ ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸೆಪ್ಟೆಂಬರ್ 15 ರಿಂದ ಪ್ರಾರಂಭವಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 14.
ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಸೆಕ್ಷನ್ ಕಂಟ್ರೋಲರ್ ಹುದ್ದೆಗೆ ಅಗತ್ಯವಿರುವ ಅರ್ಹತೆ ಮತ್ತು ಮಾನದಂಡಗಳು ಈ ಕೆಳಗಿನಂತಿವೆ…
ಹುದ್ದೆಯ ಹೆಸರು
ಸೆಕ್ಷನ್ ಕಂಟ್ರೋಲರ್ ಹುದ್ದೆ
ಒಟ್ಟು ಹುದ್ದೆಗಳು
368
ಇದನ್ನೂ ಓದಿ: ಇಂಟೆಲಿಜೆನ್ಸ್ ಬ್ಯೂರೋ ನೇಮಕಾತಿ: 394 ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ
ಶೈಕ್ಷಣಿಕ ಅರ್ಹತೆ
ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವಯೋಮತಿ
ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 20 ಹಾಗೂ ಗರಿಷ್ಠ ವಯಸ್ಸು 33 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಗರಿಷ್ಠ ವಯಸ್ಸಿನಲ್ಲಿ ಸಡಿಲಿಕೆಯಿರುತ್ತದೆ.
ಅರ್ಜಿ ಶುಲ್ಕ
ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳು 500 ರೂ. ಗಳನ್ನು ಮತ್ತು ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು 250 ರೂ. ಶುಲ್ಕವನ್ನು ಪಾವತಿಸಬೇಕಾಗುತ್ತದೆ.

RRB Section Controller 2025: ಅರ್ಜಿ ಸಲ್ಲಿಕೆ ಹೇಗೆ?
– ಈ ನೇಮಕಾತಿಯಲ್ಲಿ ಭಾಗಿವಹಿಸಲು ಅಭ್ಯರ್ಥಿಗಳು ಮೊದಲಿಗೆ ಆರ್‌ಆರ್‌ಬಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
– ನಂತರ ಅಭ್ಯರ್ಥಿಗಳು ಲಾಗಿನ್ ಮೇಲೆ ಕ್ಲಿಕ್ ಮಾಡಿ, ಅಲ್ಲಿ ಕೇಳಿರುವ ಮಾಹಿತಿಗಳನ್ನು ನೀಡಬೇಕು. ಬಳಿಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
– ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ನಿಗದಿತ ಶುಲ್ಕವನ್ನು ಪಾವತಿಸಬೇಕು.
– ಆನಂತರ ಅರ್ಜಿಯನ್ನು ಸಲ್ಲಿಸಬೇಕು. ಭವಿಷ್ಯದ ಉಲ್ಲೇಖಗಳಿಗಾಗಿ ಪ್ರಿಂಟ್‌ಔಟ್ ಅನ್ನು ತೆಗೆದುಕೊಳ್ಳಬೇಕು.
ಇದನ್ನೂ ಓದಿ: LIC ಯಿಂದ 841 ವಿವಿಧ ಹುದ್ದೆಗಳ ನೇಮಕಾತಿ
(RRB Section Controller 2025 issued Short notification for Section Controller posts)



