ಕ್ರೀಡಾಪಟುಗಳಿಗೆ ಗುಡ್‌ ನ್ಯೂಸ್‌! ದಕ್ಷಿಣ ರೈಲ್ವೆಯಲ್ಲಿ ಕ್ರೀಡಾ ಕೋಟಾದಡಿ ನೇಮಕಾತಿ

RRC SR Recruitment 2025: ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಟ್ಟದಲ್ಲಿ ವಿವಿಧ ಕ್ರೀಡೆಗಳನ್ನು ಪ್ರತಿನಿಧಿಸಿದ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುವ ಸುವರ್ಣಾವಕಾಶ ಒದಗಿ ಬಂದಿದೆ.

ದಕ್ಷಿಣ ರೈಲ್ವೆ ಸ್ಪೋರ್ಟ್ಸ್‌ ಕೋಟಾದಡಿ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯು ಸೆಪ್ಟೆಂಬರ್‌ 13 ರಿಂದ ಪ್ರಾರಂಭವಾಗಿದ್ದು ಅಕ್ಟೋಬರ್‌ 12 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಲೆವಲ್‌ 1 ರಿಂದ 5 ರವರೆಗಿನ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯ ನಡೆಯಲಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು rrcmas.in ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಗತ್ಯವಿರುವ ಅರ್ಹತೆ ಮತ್ತು ಮಾನದಂಡಗಳು ಹೀಗಿವೆ…

ಅರ್ಹತೆ ಮತ್ತು ಮಾನದಂಡಗಳು

ಆರ್‌ಆರ್‌ಸಿ ಹೊರಡಿಸಿದ ಅಧಿಸೂಚನೆಯ ಪ್ರಕಾರ ಒಟ್ಟು 67 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅದರಲ್ಲಿ ಲೆವಲ್‌ 1 ರಲ್ಲಿ 46, ಲೆವಲ್‌ 2 ಮತ್ತು 3 ರಲ್ಲಿ 16, ಲೆವಲ್‌ 4 ಮತ್ತು 5 ರಲ್ಲಿ 5 ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ವಯೋಮಿತಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಹಾಗೂ ಗರಿಷ್ಠ ವಯಸ್ಸು 25 ವರ್ಷಗಳು.

ಇದನ್ನೂ ಓದಿ: ಡಿಗ್ರಿ ಆದವರಿಗೆ RBI ನಲ್ಲಿ ಕೆಲಸ ಮಾಡುವ ಸುವರ್ಣಾವಕಾಶ: 120 ಗ್ರೇಡ್ ಬಿ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

ಶೈಕ್ಷಣಿಕ ಅರ್ಹತೆ

ಲೆವಲ್‌ 1 ರಿಂದ ಲೆವಲ್‌ 7 ವರೆಗಿನ ಹುದ್ದೆಗಳ ನೇಮಕಾತಿಗೆ ಶೈಕ್ಷಣಿಕ ಅರ್ಹತೆ ಬೇರೆ ಬೇರೆಯಾಗಿದೆ.

ನೇಮಕಾತಿ ಅಧಿಸೂಚನೆಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಶುಲ್ಕ

ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕ 500 ರೂ. ಪಾವತಿಸಬೇಕಾಗುತ್ತದೆ. ಟ್ರಯಲ್‌ನಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ 400 ರೂ. ಮರುಪಾವತಿಸಲಾಗುವುದು. ಇದಲ್ಲದೆ, ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ/ಮಾಜಿ ಸೈನಿಕ ಅಭ್ಯರ್ಥಿಗಳು 250 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಆದರೆ ಟ್ರಯಲ್‌ನಲ್ಲಿ ಪಭಾಗವಹಿಸಿದವರಿಗೆ ಸಂಪೂರ್ಣ ಶುಲ್ಕವನ್ನು ಮರುಪಾವತಿಸಲಾಗುವುದು.

ಅರ್ಜಿ ಸಲ್ಲಿಕೆ ಹೇಗೆ?

ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcmas.in ಗೆ ಭೇಟಿ ನೀಡಿ.

ನಂತರ ವೆಬ್‌ಸೈಟ್‌ನ ಮುಖಪುಟದಲ್ಲಿ, ನೇರನೇಮಕಾತಿ ಟ್ಯಾಬ್‌ಗೆ ಹೋಗಬೇಕು. ಅಲ್ಲಿ ನೋಂದಣಿ ಲಿಂಕ್‌ ಮೇಲೆ ಕ್ಲಿಕ್ಕಿಸಿ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.

ಇದಾದ ನಂತರ ಮತ್ತೊಮ್ಮೆ ಲಾಗಿನ್ ಆಗುವ ಮೂಲಕ ಅರ್ಜಿ ನೂಮೂನೆಯಲ್ಲಿ ಕೇಳಿದ ಮಾಹಿತಿಗಳನ್ನು ಭರ್ತಿ ಮಾಡಿ.

ಬಳಿಕ ನಿಗದಿತ ಶುಲ್ಕವನ್ನು ಪಾವತಿಸಿ.

ಅಂತಿಮವಾಗಿ, ಸಂಪೂರ್ಣವಾಗಿ ಭರ್ತಿ ಮಾಡಿದ ಫಾರ್ಮ್ ಅನ್ನು ಇನ್ನೊಮ್ಮೆ ಓದಿ ಸಲ್ಲಿಸಿ.

ಭವಿಷ್ಯದ ಉಲ್ಲೇಖಕ್ಕಾಗಿ ಅದರ ಮುದ್ರಣವನ್ನು ತೆಗೆದುಕೊಂಡು ಕಾಯ್ದಿಟ್ಟುಕೊಳ್ಳಿ.

ಇದನ್ನೂ ಓದಿ: ಡಿಗ್ರಿ ಆದವರಿಗೆ ಗುಡ್ ನ್ಯೂಸ್! ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿದೆ 1425 ಹುದ್ದೆಗಳು

(RRC SR Recruitment 2025 application invited under sports quota apply within October 12)

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories