SAI ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ರೂ 1 ಲಕ್ಷದವರೆಗೆ ವೇತನ

ಭಾರತೀಯ ಕ್ರೀಡಾ ಪ್ರಾಧಿಕಾರವು (SAI Recruitment 2023) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 54 ಪರ್ಫಾರ್ಮೆನ್ಸ್ ಅನಾಲಿಸ್ಟ್, ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್ ಹುದ್ದೆಗಳು ಖಾಲಿಯಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಾರ್ಚ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.

ಕೇಂದ್ರ ಸರಕಾರದ ಉದ್ಯೋಗಾಕಾಂಕ್ಷಿಗಳು ಈ ಅವಕಾಶದ ಪ್ರಯೋಜನವನ್ನು ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಭಾರತೀಯ ಕ್ರೀಡಾ ಪ್ರಾಧಿಕಾರ ಅಧಿಸೂಚನೆ ಸಂಪೂರ್ಣ ವಿವರ :
ಇಲಾಖೆಯ ಹೆಸರು : ಭಾರತೀಯ ಕ್ರೀಡಾ ಪ್ರಾಧಿಕಾರ (SAI)
ಪೋಸ್ಟ್‌ಗಳ ಸಂಖ್ಯೆ : 54 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಪರ್ಫಾರ್ಮೆನ್ಸ್ ಅನಾಲಿಸ್ಟ್, ಹೈ ಪರ್ಫಾರ್ಮೆನ್ಸ್ ಅನಾಲಿಸ್ಟ್

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
ಕಾರ್ಯಕ್ಷಮತೆ ವಿಶ್ಲೇಷಕ : 7 ಹುದ್ದೆಗಳು
ಹೆಚ್ಚಿನ ಕಾರ್ಯಕ್ಷಮತೆಯ ವಿಶ್ಲೇಷಕ : 47 ಹುದ್ದೆಗಳು

ಶೈಕ್ಷಣಿಕ ಅರ್ಹತೆ ವಿವರ :
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಬೋರ್ಡ್‌ನಿಂದ ಪದವಿ, ಡಿಪ್ಲೊಮಾ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯಸ್ಸಿನ ಮಿತಿ ವಿವರ :
ಕಾರ್ಯಕ್ಷಮತೆ ವಿಶ್ಲೇಷಕ : 40 ವರ್ಷಗಳು
ಹೆಚ್ಚಿನ ಕಾರ್ಯಕ್ಷಮತೆಯ ವಿಶ್ಲೇಷಕ : 45 ವರ್ಷಗಳು

ವಯೋಮಿತಿ ಸಡಿಲಿಕೆ ವಿವರ :
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಮೀಸಲಾತಿಗೆ ಒಳಪಟ್ಟಿರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ (ತಿಂಗಳಿಗೆ) ವಿವರ :
ಕಾರ್ಯಕ್ಷಮತೆ ವಿಶ್ಲೇಷಕ : 60,000 ರೂ.
ಹೆಚ್ಚಿನ ಕಾರ್ಯಕ್ಷಮತೆಯ ವಿಶ್ಲೇಷಕ : 1,05,000 ರೂ.

ಅರ್ಜಿ ಶುಲ್ಕ:
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : KSFC ನೇಮಕಾತಿ 2023 : ವಿವಿಧ ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಕೊಪ್ಪಳ ಜಿಲ್ಲಾ ಪಂಚಾಯತ್ ನೇಮಕಾತಿ 2023 : ತಾಂತ್ರಿಕ ಸಹಾಯಕ, ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಇದನ್ನೂ ಓದಿ : IDBI ಬ್ಯಾಂಕ್ ನೇಮಕಾತಿ 2023 : ವಿವಿಧ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಅಪ್ಲಿಕೇಶನ್ ಪ್ರಾರಂಭ ದಿನಾಂಕ : 14 ಫೆಬ್ರವರಿ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 7 ಮಾರ್ಚ್‌ 2023

SAI Recruitment 2023 : Application Invitation for Various Posts, Salary up to Rs 1 Lakh

Comments are closed.