ಎಸ್‌ಬಿಐನಲ್ಲಿ 2,273 ಅಧಿಕಾರಿ ಹುದ್ದೆಗಳ ಭರ್ಜರಿ ನೇಮಕಾತಿ: 48,480 ರೂಪಾಯಿ ಮೂಲ ವೇತನ
SBI CBO Recruitment 2026: ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2026ನೇ ಸಾಲಿನ ವೃತ್ತ ಆಧಾರಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ಒಟ್ಟು 2,273 ಹುದ್ದೆಗಳಿದ್ದು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಪ್ರಕ್ರಿಯೆಯು ಜನವರಿ 29 ರಿಂದ ಆರಂಭವಾಗಿದ್ದು ಫೆಬ್ರವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,480 ರೂಪಾಯಿ ಮೂಲ ವೇತನದೊಂದಿಗೆ ಇತರೆ ಭತ್ಯೆಗಳು ದೊರೆಯಲಿವೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿ ಹೊಂದಿರಬೇಕು. ಇದರೊಂದಿಗೆ ಯಾವುದೇ ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್ ಅಥವಾ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಅಧಿಕಾರಿಯಾಗಿ ಕನಿಷ್ಠ ಎರಡು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಕಡ್ಡಾಯವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವೃತ್ತದ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯತೆ ಹೊಂದಿರಬೇಕು. ವಯೋಮಿತಿಯು ಡಿಸೆಂಬರ್ 31 2025ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷದೊಳಗಿರಬೇಕು ಹಾಗೂ ನಿಯಮಾನುಸಾರ ವಯೋಮಿತಿ ಸಡಿಲಿಕೆ ಇರುತ್ತದೆ.
ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ
ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನಡೆಯಲಿದೆ. ಮೊದಲ ಹಂತದಲ್ಲಿ 120 ಅಂಕಗಳ ವಸ್ತುನಿಷ್ಠ ಪ್ರಶ್ನೆಗಳು ಹಾಗೂ 50 ಅಂಕಗಳ ವಿವರಣಾತ್ಮಕ ಪರೀಕ್ಷೆ ಇರುತ್ತದೆ. ಈ ಪರೀಕ್ಷೆಯಲ್ಲಿ ಯಾವುದೇ ತಪ್ಪು ಉತ್ತರಗಳಿಗೆ ಅಂಕ ಕಡಿತ ಇರುವುದಿಲ್ಲ ಎಂಬುದು ವಿಶೇಷ. ಪರೀಕ್ಷೆಯಲ್ಲಿ ತೇರ್ಗಡೆಯಾದವರನ್ನು ಸ್ಕ್ರೀನಿಂಗ್ ಮತ್ತು ಸಂದರ್ಶನಕ್ಕೆ ಕರೆಯಲಾಗುತ್ತದೆ. ಅಂತಿಮವಾಗಿ ಸ್ಥಳೀಯ ಭಾಷಾ ಪರೀಕ್ಷೆಯ ನಂತರ ಅರ್ಹರನ್ನು ಕೆಲಸಕ್ಕೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಎಸ್‌ಬಿಐ ಅಧಿಕೃತ ವೆಬ್‌ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.



