ಎಸ್‌ಬಿಐ ನ 2050 ಸಿಬಿಒ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ: ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?

SBI CBO Recruitment 2026: ದೇಶದ ಪ್ರಮುಖ ಬ್ಯಾಂಕ್‌ ಆದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (SBI) ಯುವ ಪದವೀಧರರಿಗೆ ಸರ್ಕಾರಿ ನೌಕರಿ ಮಾಡುವ ಸುವರ್ಣಾವಕಾಶವನ್ನು ತಂದಿದೆ.

ಎಸ್‌ಬಿಐ ಸರ್ಕಲ್‌ ಬೇಸ್ಡ್‌ ಆಫೀಸರ್‌ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಘೋಷಿಸಿದೆ. ಇದಕ್ಕಾಗಿ ಅಧಿಕೃತ ನೋಟಿಫಿಕೆಷನ್‌ ಕೂಡಾ ಜಾರಿ ಮಾಡಿದೆ. ಇದರ ಪ್ರಕಾರ ಎಸ್‌ಬಿಐ 2050 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಫೆಬ್ರವರಿ 18 ರೊಳಗೆ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಇತರ ಅರ್ಹತೆಗಳೇನು ಎಂಬುದನ್ನು ನೋಡೋಣ.

ಅರ್ಹತೆ ಮತ್ತು ಮಾನದಂಡಗಳು

ವಿದ್ಯಾರ್ಹತೆ

ಎಸ್‌ಬಿಐನ ಈ ನೇಮಕಾತಿಯಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಇದರಲ್ಲಿ ಇಂಜಿನಿಯರ್‌, ಸಿಎ ಅಭ್ಯರ್ಥಿಗಳು ಕೂಡಾ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷಗಳು ಹಾಗೂ ಗರಿಷ್ಠ ವಯಸ್ಸು 30 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ಅಭ್ಯರ್ಥಿಗಳು 750 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್‌ಸಿ, ಎಸ್‌ಟಿ ಮತ್ತು ಪಿಎಚ್ ಅಥವಾ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಆಯ್ಕೆ ಹೇಗೆ?

ಎಸ್‌ಬಿಐನ ಸರ್ಕಲ್‌ ಬೇಸ್ಡ್‌ ಆಫೀಸರ್‌ ನೇಮಕಾತಿ ಪ್ರಕ್ರಿಯೆಯು ಲಿಖಿತ ಪರೀಕ್ಷೆಯೊಂದಿಗೆ ಪ್ರಾರಂಭವಾಘುತ್ತದೆ. ಇದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಭಾಷಾ ಪರೀಕ್ಷೆಗೆ ಕರೆಯಲಾಗುತ್ತದೆ. ನಂತರ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಕೊನೆಯದಾಗಿ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ ಪದವೀಧರರಿಗೆ ಸುವರ್ಣಾವಕಾಶ

ಅರ್ಜಿ ಸಲ್ಲಿಕೆ ಹೇಗೆ?

Exit mobile version