ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೂನ್ 2023 ರ ನೇಮಕಾತಿ (SBI Recruitment) ಅಧಿಕೃತ ಅಧಿಸೂಚನೆಯ ಮೂಲಕ ಎಫ್‌ಎಲ್‌ಸಿ ಕೌನ್ಸಿಲರ್, ಎಫ್‌ಎಲ್‌ಸಿ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಹುದ್ದೆಗಳ ಸಂಖ್ಯೆ : 194 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಪೋಸ್ಟ್ ಹೆಸರು : ಎಫ್‌ಎಲ್‌ಸಿ ಕೌನ್ಸಿಲರ್, ಎಫ್‌ಎಲ್‌ಸಿ ನಿರ್ದೇಶಕ
ಸಂಬಳ: ರೂ.35000-60000/- ಪ್ರತಿ ತಿಂಗಳು
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
FLC ಕೌನ್ಸಿಲರ್ : 182 ಹುದ್ದೆಗಳು
FLC ನಿರ್ದೇಶಕ : 12 ಹುದ್ದೆಗಳು
ಶೈಕ್ಷಣಿಕ ಅರ್ಹತೆ ವಿವರ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಈ ಬ್ಯಾಂಕ್ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಎಸ್‌ಬಿಐ ನಿಯಮಗಳ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ ವಿವರ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಜೂನ್ 15, 2023 ರಂತೆ ಕನಿಷ್ಠ 60 ವರ್ಷ ವಯಸ್ಸಿನಿಂದ ಗರಿಷ್ಠ 63 ವರ್ಷ ವಯಸ್ಸನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ಸಡಿಲಿಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಯಾವುದೇ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಬ್ಯಾಂಕ್ ಹುದ್ದೆಗಳಿಗಾಗಿ ಾರ್ಹ ಅಭ್ಯರ್ಥಿಗಳನ್ನು ಕಿರುಪಟ್ಟಿ, ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : Nimhans Recruitment 2023 : ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15 ಜೂನ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 06 ಜುಲೈ 2023
SBI Recruitment : Job opportunity in SBI, Rs. 60 thousand Salary