ಎಸ್‌ಬಿಐ ಮೆಡಿಕಲ್‌ ಆಫೀಸರ್‌ ಹುದ್ದೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ : ಫಾರ್ಮ್‌ ಭರ್ತಿಗೆ ಜುಲೈ 21 ರವರೆಗೆ ಅವಕಾಶ

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ಆಫ್ ಮೆಡಿಕಲ್ ಆಫೀಸರ್ (BMO) ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.

ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಮತ್ತು ಬ್ಯಾಂಕ್ ಆಫ್ ಮೆಡಿಕಲ್ ಆಫೀಸರ್ (BMO) ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಕೆಲವು ಕಾರಣಗಳಿಂದ ಈ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಸಿಕ್ಕಂತಾಗಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಜುಲೈ 21 ರೊಳಗೆ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ. ಈ ಅರ್ಹತೆಗಳಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ

ಈ ನೇಮಕಾತಿಯಲ್ಲಿಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 35 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಶೈಕ್ಷಣಿಕ ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಬಿಬಿಎಸ್‌ ಪದವಿ ಹೊಂದಿರಬೇಕು.

ವೇತನ

ಎಸ್‌ಬಿಐನ ಬಿಎಮ್‌ಒ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 64,820 ರಿಂದ 93,960 ರೂ.ಗಳವರೆಗೆ ವೇತನ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ ಹೇಗೆ?

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ಆಯ್ಕೆಯು ಮೂರು ಹಂತಗಳಲ್ಲಿ ನಡೆಯಲಿದೆ. ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ಬಿಇ, ಬಿಟೆಕ್‌ ಆದವರಿಗೆ ಗುಡ್‌ನ್ಯೂಸ್‌ : ಭಾರತೀಯ ನೌಕಾಪಡೆಯ ಎಸ್‌ಎಸ್‌ಸಿ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ

ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹750. ಎಸ್‌ಸಿ/ಎಸ್‌ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ?

  • ಅರ್ಜಿ ಸಲ್ಲಿಸಲು, ಮೊದಲು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  • ಅಲ್ಲಿ ವೆಬ್‌ಸೈಟ್‌ನ ಮುಖಪುಟದಲ್ಲಿರುವ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ಲಾಗಿನ್ ವಿವರಗಳನ್ನು ನಮೂದಿಸಿ ಲಾಗಿನ್‌ ಆಗಿ.
  • ನಂತರ, ಅಗತ್ಯವಿರುವ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ಕೊನೆಯದಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಫಾರ್ಮ್‌ ಸಲ್ಲಿಸಿ.
  • ಅಂತಿಮವಾಗಿ ಅದರ ಪ್ರಿಂಟ್‌ಔಟ್‌ ತೆಗೆದುಕೊಳ್ಳಿ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.