ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಮತ್ತು ಬ್ಯಾಂಕ್ ಆಫ್ ಮೆಡಿಕಲ್ ಆಫೀಸರ್ (BMO) ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಕೆಲವು ಕಾರಣಗಳಿಂದ ಈ ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗದ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ಸಿಕ್ಕಂತಾಗಿದೆ. ಅಭ್ಯರ್ಥಿಗಳು ಇದರ ಸದುಪಯೋಗ ಪಡಿಸಿಕೊಂಡು ಜುಲೈ 21 ರೊಳಗೆ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ. ಈ ಅರ್ಹತೆಗಳಿರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ
ಈ ನೇಮಕಾತಿಯಲ್ಲಿಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು 35 ವರ್ಷಗಳಿಗೆ ನಿಗದಿಪಡಿಸಲಾಗಿದೆ. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.
ಶೈಕ್ಷಣಿಕ ಅರ್ಹತೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಬಿಬಿಎಸ್ ಪದವಿ ಹೊಂದಿರಬೇಕು.
ವೇತನ
ಎಸ್ಬಿಐನ ಬಿಎಮ್ಒ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 64,820 ರಿಂದ 93,960 ರೂ.ಗಳವರೆಗೆ ವೇತನ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ ಹೇಗೆ?
ಈ ನೇಮಕಾತಿಯಲ್ಲಿ ಅಭ್ಯರ್ಥಿಗಳ ಆಯ್ಕೆಯು ಮೂರು ಹಂತಗಳಲ್ಲಿ ನಡೆಯಲಿದೆ. ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ: ಬಿಇ, ಬಿಟೆಕ್ ಆದವರಿಗೆ ಗುಡ್ನ್ಯೂಸ್ : ಭಾರತೀಯ ನೌಕಾಪಡೆಯ ಎಸ್ಎಸ್ಸಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ
ಅರ್ಜಿ ಶುಲ್ಕ
ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹750. ಎಸ್ಸಿ/ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
- ಅರ್ಜಿ ಸಲ್ಲಿಸಲು, ಮೊದಲು ಎಸ್ಬಿಐನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- ಅಲ್ಲಿ ವೆಬ್ಸೈಟ್ನ ಮುಖಪುಟದಲ್ಲಿರುವ ನೋಂದಣಿ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ಲಾಗಿನ್ ವಿವರಗಳನ್ನು ನಮೂದಿಸಿ ಲಾಗಿನ್ ಆಗಿ.
- ನಂತರ, ಅಗತ್ಯವಿರುವ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್ಲೋಡ್ ಮಾಡಿ.
- ಕೊನೆಯದಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಫಾರ್ಮ್ ಸಲ್ಲಿಸಿ.
- ಅಂತಿಮವಾಗಿ ಅದರ ಪ್ರಿಂಟ್ಔಟ್ ತೆಗೆದುಕೊಳ್ಳಿ.
