ಕರ್ನಾಟಕ ರೈಲ್ವೆ ಇಲಾಖೆಯಲ್ಲಿ ಭರ್ಜರಿ ನೇಮಕಾತಿ ಕೂಡಲೇ ಅರ್ಜಿ ಸಲ್ಲಿಸಿ

ದಕ್ಷಿಣ ಮಧ್ಯೆ ರೈಲ್ವೆ ಇಲಾಖೆಯಿಂದ ಹೊಸ ನೇಮಕಾತಿ (SCR Recruitment 2023) ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಈ ಕೆಳಗೆ ತಿಳಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ದಕ್ಷಿಣ ಮಧ್ಯೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ವಿವರ :
ಇಲಾಖೆ ಹೆಸರು : ದಕ್ಷಿಣ ಮಧ್ಯೆ ರೈಲ್ವೆ (South Central Railway)
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 4103 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್‌
ಉದ್ಯೋಗ ಸ್ಥಳ : ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕ ತೆಲಂಗಾಣ

ದಕ್ಷಿಣ ಮಧ್ಯೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

  • ಎಸಿ ಮೆಕ್ಯಾನಿಕ್‌ : 250 ಹುದ್ದೆಗಳು
  • ಬಡಗಿ : 18 ಹುದ್ದೆಗಳು
  • ಡಿಸೇಲ್‌ ಮೆಕ್ಯಾನಿಕ್‌ : 531 ಹುದ್ದೆಗಳು
  • ಎಲೆಕ್ಟ್ರಿಷಿಯನ್‌ : 1019 ಹುದ್ದೆಗಳು
  • ಎಲೆಕ್ಟ್ರಾನಿಕ್‌ ಮೆಕ್ಯಾನಿಕ್‌ : 92 ಹುದ್ದೆಗಳು
  • ಫಿಟ್ಟರ್‌ : 1460 ಹುದ್ದೆಗಳು
  • ಯಂತ್ರಶಾಸ್ತ್ರಜ್ಞ : 71 ಹುದ್ದೆಗಳು
  • ಮೆಕ್ಯಾನಿಕ್‌ ಮೆಷಿನ್‌ ಟೂಲ್‌ ನಿರ್ವಹಣೆ (MMW): 24 ಹುದ್ದೆಗಳು
  • ಪೇಂಟರ್‌ : 80 ಹುದ್ದೆಗಳು
  • ವೆಲ್ಡರ್‌ : 553 ಹುದ್ದೆಗಳು

ವಿದ್ಯಾರ್ಹತೆ :
ದಕ್ಷಿಣ ಮಧ್ಯ ರೈಲ್ವೆ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ಗಳು ಅಥವಾ ವಿಶ್ವವಿದ್ಯಾಲಯಗಳಿಂದ ೧೦ನೇ ತರಗತಿ, ಐಟಿಐ, ಎನ್ಸಿವಿಟಿ ಅಥವಾ ಎಸಿವಿಟಿ ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ದಕ್ಷಿಣ ಮಧ್ಯ ರೈಲ್ವೆ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಡಿಸೆಂಬರ್‌ 30, 2022ಕ್ಕೆ ಕನಿಷ್ಠ 15 ವರ್ಷ ವಯಸ್ಸಾಗಿರಬೇಕು. ಹಾಗೆಯೇ ಗರಿಷ್ಠ 24 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ ವಿವರ :
ದಕ್ಷಿಣ ಮಧ್ಯ ರೈಲ್ವೆ ಅಧಿಕೃತ ಅಧಿಸೂಚನೆಯ ಪ್ರಕಾರ, ಒಬಿಸಿ (ಎನ್ಸಿಎಲ್)‌ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ. ಎಸ್‌ಸಿ ಅಥವಾ ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ. ಅಂಗವಿಕಲ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.

ವೇತನ ಶ್ರೇಣಿ ವಿವರ :
ದಕ್ಷಿಣ ಮಧ್ಯ ರೈಲ್ವೆ ಅಧಿಕೃತ ಅಧಿಸೂಚನೆಯ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ವೇತನವನ್ನು ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ :
ಎಸ್‌ಸಿ/ಎಸ್‌ಟಿ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ : ರೂ. 100

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೆರಿಟ್‌ ಪಟ್ಟಿ ವೈದ್ಯಕೀಯ ಪರೀಕ್ಷೆ, ದೈಹಿಕ ಗುಣಮಟ್ಟ ನೋಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : Indian Post Recruitment 2023 : ಅಂಚೆ ಇಲಾಖೆಯಲ್ಲಿ 40889 ಹುದ್ದೆಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ : KMF RBKMUL Recruitment 2023 : ಕೆಎಮ್‌ಎಫ್‌ ವಿವಿಧ ಹುದ್ದೆಗಳಿಗೆ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : KVAFSU Recruitment 2023 : ಪಶು, ಮೀನುಗಾರಿಕೆ ಇಲಾಖೆ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 30 ಡಿಸೆಂಬರ್‌ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29 ಜನವರಿ 2023

SCR Recruitment 2023 : recruitment in Karnataka Railway Department apply immediately

Comments are closed.