SDM ಕಾಲೇಜು ಹೊನ್ನಾವರ ನೇಮಕಾತಿ 2023 : ಅಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ನೇಮಕಾತಿ (SDM College Honavar Recruitment 2023) ಅಧಿಕೃತ ಅಧಿಸೂಚನೆ ಮಾರ್ಚ್ 2023ರ ಮೂಲಕ ವಿವಿಧ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಾಲೇಜು ಶಿಕ್ಷಕರ ಹುದ್ದೆಗಾಗಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಎಸ್‌ಡಿಎಮ್‌ ಕಾಲೇಜು ಹೊನ್ನಾವರ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು
ಹುದ್ದೆಗಳ ಸಂಖ್ಯೆ : 8 ಹುದ್ದೆಗಳು
ಉದ್ಯೋಗ ಸ್ಥಳ : ಉತ್ತರ ಕನ್ನಡ
ಹುದ್ದೆಯ ಹೆಸರು : ಪ್ರಾಧ್ಯಾಪಕರು

ಎಸ್‌ಡಿಎಮ್‌ ಕಾಲೇಜು ಹೊನ್ನಾವರದಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ರಸಾಯನಶಾಸ್ತ್ರ : 1 ಹುದ್ದೆ
ಪ್ರಾಣಿಶಾಸ್ತ್ರ : 1 ಹುದ್ದೆ
ಭೌತಶಾಸ್ತ್ರ : 2 ಹುದ್ದೆಗಳು
ಗಣಿತ : 1 ಹುದ್ದೆ
ವಾಣಿಜ್ಯ : 2 ಹುದ್ದೆಗಳು
ಗ್ರಂಥಪಾಲಕ : 1 ಹುದ್ದೆ

ಶೈಕ್ಷಣಿಕ ಅರ್ಹತೆ :
ಎಸ್‌ಡಿಎಮ್‌ ಕಾಲೇಜು ಹೊನ್ನಾವರದ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪಿಎಚ್‌ಡಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ ವಿವರ :
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ :
SC/ST/Cat-I ಅಭ್ಯರ್ಥಿಗಳು : 05 ವರ್ಷಗಳು
OBC ಅಭ್ಯರ್ಥಿಗಳು : 03 ವರ್ಷಗಳು

ಅರ್ಜಿ ಶುಲ್ಕ :
SC/ST/Cat-I ಅಭ್ಯರ್ಥಿಗಳು : ರೂ.1000/-
ಎಲ್ಲಾ ಇತರ ಅಭ್ಯರ್ಥಿಗಳು : ರೂ.2000/-

ಪಾವತಿ ವಿಧಾನ:
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

SDM ಕಾಲೇಜ್ ಹೊನ್ನಾವರ ನೇಮಕಾತಿಗೆ ಹೇಗೆ ಅರ್ಜಿ ಸಲ್ಲಿಸಬೇಕು :
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಅಧ್ಯಕ್ಷರು, ಮಲ್ನಾಡ್ ಪ್ರೋಗ್ರೆಸ್ಸಿವ್ ಎಜುಕೇಶನ್ ಸೊಸೈಟಿ, ಪ್ರಭಾತ್ ನಗರ, ಹೊನಾವರ-581334 (ಯು.ಕೆ) ಗೆ ಮಾರ್ಚ್ 22, 2023 ಅಥವಾ ಮೊದಲು ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆಗಳ ಮೂಲಕ ಕಳುಹಿಸಬೇಕಾಗುತ್ತದೆ.

ಇದನ್ನೂ ಓದಿ : RCUB ನೇಮಕಾತಿ 2023 : ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದನ್ನೂ ಓದಿ : ಗಡಿ ಭದ್ರತಾ ಪಡೆ : ಮಾಜಿ ಅಗ್ನಿವೀರ್‌ಗಳಿಗೆ ಶೇ.10ರಷ್ಟು ಮೀಸಲಾತಿ ಘೋಷಣೆ

ಇದನ್ನೂ ಓದಿ : Canara Bank Recruitment 2023 : ಸ್ನಾತಕೋತ್ತರ ಪದವೀಧರಿಗೆ ಉದ್ಯೋಗಾವಕಾಶ ಕೂಡಲೇ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಮಾರ್ಚ್‌ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22 ಮಾರ್ಚ್ 2023

SDM College Honavar Recruitment 2023 : Application Invitation for Faculty Posts

Comments are closed.