ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿ 2023 : ಜನರಲ್ ಮ್ಯಾನೇಜರ್ ಹುದ್ದೆಗೆ ಉದ್ಯೋಗಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ

ಶ್ರೀ ಶಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನೇಮಕಾತಿ (Shree Shiddeshwar Co-op Bank Recruitment 2023) ಏಪ್ರಿಲ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೋ-ಆಪ್ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಶ್ರೀ ಶಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಸಂಖ್ಯೆ : 1 ಹುದ್ದೆ
ಉದ್ಯೋಗ ಸ್ಥಳ : ವಿಜಯಪುರ
ಹುದ್ದೆಯ ಹೆಸರು : ಜನರಲ್ ಮ್ಯಾನೇಜರ್ ಹುದ್ದೆ
ವೇತನ ಶ್ರೇಣಿ : ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ :
ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಡಿಪ್ಲೊಮಾ, CAIIB, MBA, ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು :
ಅಭ್ಯರ್ಥಿಗಳು ಬ್ಯಾಂಕಿಂಗ್ ವಲಯದಲ್ಲಿ ಮಧ್ಯಮ/ಹಿರಿಯ ನಿರ್ವಹಣಾ ಮಟ್ಟದಲ್ಲಿ ಕನಿಷ್ಠ 08 ವರ್ಷಗಳ ಸಂಯೋಜಿತ ಅನುಭವವನ್ನು ಹೊಂದಿರಬೇಕು.

ವಯೋಮಿತಿ ವಿವರ :
ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಠ 35 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 55 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮತಿಯನ್ನು ಶ್ರೀ ಶಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿ ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು
ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ NRC ಅಧ್ಯಕ್ಷರಾದ ಶ್ರೀ ಶಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್, ಆಡಳಿತ ಕಚೇರಿ, ಶ್ರೀ. ಶಿದ್ದೇಶ್ವರ ರಸ್ತೆ, ವಿಜಯಪುರ-586101, ಕರ್ನಾಟಕ ಏಪ್ರಿಲ್‌ 30, 2023 ರಂದು ಅಥವಾ ಮೊದಲು ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ ಮೂಲಕ ಕಳುಹಿಸಬೇಕಾಗುತ್ತದೆ.

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಏಪ್ರಿಲ್‌ 2023
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಏಪ್ರಿಲ್‌ 2023

ಇದನ್ನೂ ಓದಿ : ಯೂನಿಯನ್ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಭ್ಯರ್ಥಿಗಳ ಗಮನಕ್ಕೆ : ಶ್ರೀ ಶಿದ್ದೇಶ್ವರ ಕೋ-ಆಪ್ ಬ್ಯಾಂಕ್ ನೇಮಕಾತಿಯ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ, ಅಭ್ಯರ್ಥಿಗಳು ಈ ಮೊಬೈಲ್ ಸಂಖ್ಯೆ: 93530 96653/94484 37320 ಮೂಲಕ ಸಂಪರ್ಕಿಸಬಹುದಾಗಿದೆ. ಇನ್ನು ಅಧಿಕೃತ ವೆಬ್‌ಸೈಟ್ ಆದ shiddeshwarbank.com ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

Shree Shiddeshwar Co-op Bank Recruitment 2023 : General Manager Vacancy, Apply Immediately

Comments are closed.