ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ : ವಿವಿಧ ಹುದ್ದೆಗಳ ನೇಮಕಾತಿ

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ (SIDBI Recruitment 2023) ಅಧಿಸೂಚನೆಯಲ್ಲಿ 19 ಮುಖ್ಯ ತಾಂತ್ರಿಕ ಸಲಹೆಗಾರರು, ಆಡಿಟ್ ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾವು ಫೆಬ್ರುವರಿ 2023 ರ SIDBI ಅಧಿಕೃತ ಅಧಿಸೂಚನೆಯ ಮೂಲಕ ಮುಖ್ಯ ತಾಂತ್ರಿಕ ಸಲಹೆಗಾರ, ಲೆಕ್ಕಪರಿಶೋಧಕ ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಯ ಅಧಿಸೂಚನೆಯ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ (SIDBI)
ಹುದ್ದೆಗಳ ಸಂಖ್ಯೆ : 19 ಹುದ್ದೆಗಳು
ಉದ್ಯೋಗ ಸ್ಥಳ : ಮುಂಬೈ – ಚೆನ್ನೈ – ಬೆಂಗಳೂರು – ಲಕ್ನೋ
ಹುದ್ದೆಯ ಹೆಸರು : ಮುಖ್ಯ ತಾಂತ್ರಿಕ ಸಲಹೆಗಾರ, ಆಡಿಟ್ ಸಲಹೆಗಾರ

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :

  • ಮುಖ್ಯ ತಾಂತ್ರಿಕ ಸಲಹೆಗಾರ (CTA) : 1 ಹುದ್ದೆ
  • ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Dy. CTO) : 2 ಹುದ್ದೆಗಳು
  • ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ (CHRO) : 1 ಹುದ್ದೆಗಳು
  • ಕಾನೂನು ಸಲಹೆಗಾರ ಮತ್ತು ಸಾಮಾನ್ಯ ಸಲಹೆಗಾರ : 1 ಹುದ್ದೆ
  • ಉಪ ಕಾನೂನು ಸಲಹೆಗಾರ ಮತ್ತು ಸಾಮಾನ್ಯ ಸಲಹೆಗಾರ : 2 ಹುದ್ದೆಗಳು
  • ಲೀಗಲ್ ಅಸೋಸಿಯೇಟ್ ಮತ್ತು ಕೌನ್ಸಿಲ್ (LAcC) : 1 ಹುದ್ದೆ
  • ಸಲಹೆಗಾರ CA (ಕ್ರೆಡಿಟ್ ವಿಶ್ಲೇಷಕ) : 3 ಹುದ್ದೆಗಳು
  • ಆಡಿಟ್ ಕನ್ಸಲ್ಟೆಂಟ್ : 3 ಹುದ್ದೆಗಳು
  • ಸಲಹೆಗಾರ CA (GP) : 1 ಹುದ್ದೆ
  • ಆರ್ಥಿಕ ಸಲಹೆಗಾರ : 1 ಹುದ್ದೆ
  • SIDBI ಅಭಿವೃದ್ಧಿ ಕಾರ್ಯನಿರ್ವಾಹಕ : 3 ಹುದ್ದೆಗಳು

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಅರ್ಹತೆಯ ವಿವರ :

  • ಮುಖ್ಯ ತಾಂತ್ರಿಕ ಸಲಹೆಗಾರ (CTA) ಸಿವಿಲ್/ಎಲೆಕ್ಟ್ರಿಕಲ್ ಇಂಜಿನಿಯರಿಂಗ್‌ನಲ್ಲಿ : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಬಿ.ಇ ಅಥವಾ ಬಿ ಟೆಕ್‌ನಲ್ಲಿ ಉತ್ತೀರ್ಣರಾಗಿರಬೇಕು.
  • ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Dy CTO) : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಬಿ.ಇ ಅಥವಾ ಬಿ ಟೆಕ್‌ ಮತ್ತು ಎಮ್‌ಬಿಎಯಲ್ಲಿ ಉತ್ತೀರ್ಣರಾಗಿರಬೇಕು.
  • ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ (CHRO) : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ಕಾನೂನು ಸಲಹೆಗಾರ ಮತ್ತು ಸಾಮಾನ್ಯ ಸಲಹೆಗಾರ : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಎಲ್‌ಎಲ್‌ಬಿಯಲ್ಲಿ ಉತ್ತೀರ್ಣರಾಗಿರಬೇಕು.
  • ಉಪ ಕಾನೂನು ಸಲಹೆಗಾರ ಮತ್ತು ಸಾಮಾನ್ಯ ಸಲಹೆಗಾರ :ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಎಲ್‌ಎಲ್‌ಬಿಯಲ್ಲಿ ಉತ್ತೀರ್ಣರಾಗಿರಬೇಕು.
  • ಲೀಗಲ್ ಅಸೋಸಿಯೇಟ್ ಮತ್ತು ಕೌನ್ಸಿಲ್ (LAcC) : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಎಲ್‌ಎಲ್‌ಬಿಯಲ್ಲಿ ಉತ್ತೀರ್ಣರಾಗಿರಬೇಕು.
  • ಸಲಹೆಗಾರ CA (ಕ್ರೆಡಿಟ್ ವಿಶ್ಲೇಷಕ) : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ CA ಅಥವಾ ICWA, ಪದವಿ, MBA, PGDBM ಉತ್ತೀರ್ಣರಾಗಿರಬೇಕು.
  • ಆಡಿಟ್ ಕನ್ಸಲ್ಟೆಂಟ್ : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ICAI, ICWAI ಉತ್ತೀರ್ಣರಾಗಿರಬೇಕು.
  • ಸಲಹೆಗಾರ : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ CA (GP)ಯಲ್ಲಿ ಉತ್ತೀರ್ಣರಾಗಿರಬೇಕು.
  • ಆರ್ಥಿಕ ಸಲಹೆಗಾರ : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • SIDBI ಅಭಿವೃದ್ಧಿ ಕಾರ್ಯನಿರ್ವಾಹಕ : ಈ ಹುದ್ದೆಗಾಗಿ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಲ್ಲಿ ICAI, ICWAI ಉತ್ತೀರ್ಣರಾಗಿರಬೇಕು.

SIDBI ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯೋಮಿತಿ ವಿವರ :

  • ಮುಖ್ಯ ತಾಂತ್ರಿಕ ಸಲಹೆಗಾರ (CTA) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯಸ್ಸು ಮೀರಿರಬಾರದು.
  • ಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ (Dy. CTO) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯಸ್ಸು ಮೀರಿರಬಾರದು.
  • ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ (CHRO) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50 ರಿಂದ 57ವರ್ಷ ವಯಸ್ಸು ಮೀರಿರಬಾರದು.
  • ಕಾನೂನು ಸಲಹೆಗಾರ ಮತ್ತು ಸಾಮಾನ್ಯ ಸಲಹೆಗಾರ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 55 ವರ್ಷ ವಯಸ್ಸು ಮೀರಿರಬಾರದು.
  • ಉಪ ಕಾನೂನು ಸಲಹೆಗಾರ ಮತ್ತು ಸಾಮಾನ್ಯ ಸಲಹೆಗಾರ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
  • ಲೀಗಲ್ ಅಸೋಸಿಯೇಟ್ ಮತ್ತು ಕೌನ್ಸಿಲ್ (LAcC) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
  • ಸಲಹೆಗಾರ CA (ಕ್ರೆಡಿಟ್ ವಿಶ್ಲೇಷಕ) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
  • ಆಡಿಟ್ ಕನ್ಸಲ್ಟೆಂಟ್ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
  • ಸಲಹೆಗಾರ CA (GP) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
  • ಆರ್ಥಿಕ ಸಲಹೆಗಾರ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯಸ್ಸು ಮೀರಿರಬಾರದು.
  • SIDBI ಅಭಿವೃದ್ಧಿ ಕಾರ್ಯನಿರ್ವಾಹಕ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ SIDBI ಮಾನದಂಡಗಳ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ.

ಆಯ್ಕೆ ಪ್ರಕ್ರಿಯೆ :
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

SIDBI ನೇಮಕಾತಿಯಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, [email protected] ಗೆ 12-ಫೆಬ್ರವರಿ-2023 ರಂದು ಅಥವಾ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕಾಗಿದೆ.

ಇದನ್ನೂ ಓದಿ : ಕೃಷಿ ಇಲಾಖೆ ಹೊಸ ನೇಮಕಾತಿ 2023 : ಸಹಾಯಕ ಕೃಷಿ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ

ಇದನ್ನೂ ಓದಿ : ಪೋಸ್ಟ್ ಆಫೀಸ್ ನೇಮಕಾತಿ 2023 : SSLC ಪಾಸಾದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ

ಇದನ್ನೂ ಓದಿ : ಆದಾಯ ತೆರಿಗೆ ಇಲಾಖೆ ನೇಮಕಾತಿ 2023 : ತೆರಿಗೆ ಸಹಾಯಕ, ಇನ್ಸ್ಪೆಕ್ಟರ್‌ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 06-02-2023
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 12-ಫೆಬ್ರವರಿ-2023

SIDBI Recruitment 2023: Small Industries Development Bank of India : Recruitment for Various Posts

Comments are closed.