ಪ್ರತಿಷ್ಠಿತ ಕೆನರಾ ಬ್ಯಾಂಕ್ ನಲ್ಲಿ ಖಾಲಿ ಇರುವ ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 220 ವಿಶೇಷ ಅಧಿಕಾರಿ ಹುದ್ದೆಗಳು ಖಾಲಿ ಇದ್ದು, ಆನ್ಲೈನ್ ಮೂಲಕ ಅರ್ಜಿ ಸಲ್ಲಸಿಬಹುದಾಗಿ ತಿಳಿಸಿದೆ.
ವಿದ್ಯಾರ್ಹತೆ: ಬಿ.ಇ, ಬಿ.ಟೆಕ್, ಎಂ.ಇ, ಎಂ.ಟೆಕ್, ಎಂಸಿಎ ವಿದ್ಯಾರ್ಹತೆಯನ್ನುಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ: ವಿಶೇಷ ಅಧಿಕಾರಿ ಹುದ್ದೆಗಳಿಗೆ ಅಕ್ಟೋಬರ್ 1, 2020ರ ಅನ್ವಯ ಕನಿಷ್ಟ 22 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. (ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ-ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,-ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ)
ವೇತನ: ತಿಂಗಳಿಗೆ 23,700/- ರಿಂದ 51,490/-ರೂ.
ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದೆ. ಸಾಮಾನ್ಯ/ ಓಬಿಸಿ ಅಭ್ಯರ್ಥಿಗಳು 600ರೂ. ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಡಲಾಗುತ್ತದೆ.
ಹೀಗೆ ಅರ್ಜಿ ಸಲ್ಲಿಸಿ : ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.canarabank.com/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 15,2020೦ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.