ಭಾರತೀಯ ಕ್ರೀಡಾ ಪ್ರಾಧಿಕಾರವು (Sports Authority of India Recruitment 2023) ಜುಲೈ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಯುವ ವೃತ್ತಿಪರ (ಕಾನೂನು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಗಳನ್ನು ಭರ್ತಿ ಮಾಡುವ ಮೊದಲು ಈ ಹುದ್ದೆಗಳಿಗೆ ಅಗತ್ಯವಿರುವ ವಯಸ್ಸಿನ ಮಿತಿ, ವಿದ್ಯಾರ್ಹತೆ ಮತ್ತು ಅನುಭವ ಸೇರಿದಂತೆ ಎಲ್ಲಾ ಅರ್ಹತಾ ಷರತ್ತುಗಳನ್ನು ಪರಿಶೀಲಿಸಲು ಸೂಚಿಸಲಾಗಿದೆ.
ಭಾರತೀಯ ಕ್ರೀಡಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :
ಸಂಸ್ಥೆಯ ಹೆಸರು : ಭಾರತೀಯ ಕ್ರೀಡಾ ಪ್ರಾಧಿಕಾರ
ಹುದ್ದೆಗಳ ಸಂಖ್ಯೆ : 1 ಹುದ್ದೆ
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆಯ ಹೆಸರು : ಯಂಗ್ ಪ್ರೊಫೆಷನಲ್ (ಕಾನೂನು)
ವೇತನ : ರೂ.50000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ :
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಕಾನೂನು ಪದವಿ, LLB ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ ವಿವರ :
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯಸ್ಸನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಭಾರತೀಯ ಕ್ರೀಡಾ ಪ್ರಾಧಿಕಾರದ ನಿಯಮಗಳ ಪ್ರಕಾರ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅರ್ಜಿ ಸಲ್ಲಿಸುವ ಯಾವುದೇ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕವಿರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಭಾರತೀಯ ಕ್ರೀಡಾ ಪ್ರಾಧಿಕಾರದ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಈ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಾಗಿ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : Federal Bank Recruitment 2023 : ಫೆಡರಲ್ ಬ್ಯಾಂಕ್ ಪದವಿ, ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗಾವಕಾಶ, 60, ರೂ ವೇತನ
ಇದನ್ನೂ ಓದಿ : NIMHANS Recruitment 2023 : ನಿಮ್ಹಾನ್ಸ್ ನೇಮಕಾತಿ 2023 : ಜುಲೈ 4ಕ್ಕೆ ನೇರ ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 29 ಜೂನ್ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08 ಜುಲೈ 2023
Sports Authority of India Recruitment 2023 : Jobs in Sports Authority of India, Apply now