ದೇಶದ ಪ್ರಮುಖ ಬ್ಯಾಂಕ್ ಆಗಿರುವ ಎಸ್ ಬಿಐ ( ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ) ಪದವಿಧರರಿಗೆ ಗುಡ್ ನ್ಯೂಸ್ ಕೊಟ್ಟಿದೆ. ಎಸ್ ಬಿಐ 8500 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 10ರ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವೇತನದ ವಿವರ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲ ವರ್ಷ ತಿಂಗಳಿಗೆ 15,000 ರೂ, ಎರಡನೇ ವರ್ಷ ತಿಂಗಳಿಗೆ 16,500ರೂ ಮತ್ತು ಮೂರನೇ ವರ್ಷ 19,000ರೂ ವೇತನ ಸಿಗಲಿದೆ.
ಶೈಕ್ಷಣಿಕ ವಿದ್ಯಾರ್ಹತೆ
ಪದವಿ ಪಡೆದ ಅಭ್ಯರ್ಥಿಗಳು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯೋಮಿತಿ
ಅಪ್ರೆಂಟಿಸ್ ಹುದ್ದೆಗಳಿಗೆ ಅಕ್ಟೋಬರ್ 31,2020ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, 2ಎ, 2ಬಿ, 3ಎ ಮತ್ತು 3ಬಿ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಶುಲ್ಕ
ಸಾಮಾನ್ಯ/ಓಬಿಸಿ/ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 300 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿಯನ್ನು ಹೀಗೆ ಸಲ್ಲಿಸಿ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊರಡಿಸಿರುವ ಅಪ್ರೆಂಟಿಸ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿಸಲ್ಲಿಸಬೇಕು. ಎಸ್‌ಬಿಐ ಅಧಿಕೃತ ವೆಬ್‌ಸೈಟ್ https://sbi.co.in/web/careers ಗೆ ಭೇಟಿ ನೀಡಿ. ನಂತರ ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ, ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳಿಗೆ ಆನ್‌ಲೈನ್, ಪ್ರಾದೇಶಿಕ ಭಾಷೆ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.