ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ (State Bank of India Recruitment 2023) ಏಪ್ರಿಲ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಸಪೋರ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕಾಗಿದೆ. ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ. ಹಾಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕಾಗಿದೆ.‌

State Bank of India : ಎಸ್‌ಬಿಐ ನೇಮಕಾತಿ ಅಧಿಸೂಚನೆಯ ಸಂಪೂರ್ಣ ವಿವರ :

ಬ್ಯಾಂಕ್ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)
ಹುದ್ದೆಗಳ ಸಂಖ್ಯೆ : 1031 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್, ಸಪೋರ್ಟ್ ಆಫೀಸರ್
ವೇತನ : ರೂ.36000-41000/- ಪ್ರತಿ ತಿಂಗಳು

ಎಸ್‌ಬಿಐ ಬ್ಯಾಂಕ್ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ :
ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್ : 821 ಹುದ್ದೆಗಳು
ಚಾನೆಲ್ ಮ್ಯಾನೇಜರ್ ಮೇಲ್ವಿಚಾರಕ : 172 ಹುದ್ದೆಗಳು
ಬೆಂಬಲ ಅಧಿಕಾರಿ : 38 ಹುದ್ದೆಗಳು

ಶೈಕ್ಷಣಿಕ ಅರ್ಹತೆ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿ ಹಾಗೂ ವಿಶ್ವವಿದ್ಯಾಲಯಗಳಿಂದ ಎಸ್‌ಬಿಐ ನಿಯಮಗಳ ಪ್ರಕಾರ ಯಾವುದಾದರೂ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

ವಯಸ್ಸಿನ ಮಿತಿ ವಿವರ :
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಾಗಿ ಅಭ್ಯರ್ಥಿಗಳು ಏಪ್ರಿಲ್‌ 01, 2023 ರಂತೆ ಕನಿಷ್ಠ 60 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 63 ವರ್ಷ ವಯಸ್ಸು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳ ವಯೋಮಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿಯಮಗಳ ಪ್ರಕಾರ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಕಿರುಪಟ್ಟಿ, ಮೆರಿಟ್ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಎಸ್‌ಬಿಐ ಬ್ಯಾಂಕ್ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳ (ತಿಂಗಳಿಗೆ) ವಿವರ :
ಚಾನೆಲ್ ಮ್ಯಾನೇಜರ್ ಫೆಸಿಲಿಟೇಟರ್ : ರೂ.36000/-
ಚಾನೆಲ್ ಮ್ಯಾನೇಜರ್ ಮೇಲ್ವಿಚಾರಕ : ರೂ.41000/-
ಬೆಂಬಲ ಅಧಿಕಾರಿ : ರೂ.41000/-

ಇದನ್ನೂ ಓದಿ : IRCTC ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ, ಕೂಡಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ : ವಿವಿಧ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01 ಏಪ್ರಿಲ್‌ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30 ಏಪ್ರಿಲ್‌ 2023

State Bank of India Recruitment 2023 : Application Invitation for Various Posts

Comments are closed.