Anganwadi Recruitment 2022 : ಅಂಗನವಾಡಿ ಕಾರ್ಯಕರ್ತರು, ಸಹಾಯಕರ ಖಾಲಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ (Anganwadi Recruitment 2022 ) ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10ನೇ ತರಗತಿ (ಅಂಗನವಾಡಿ ಕಾರ್ಯಕರ್ತೆ), ಕನಿಷ್ಟ 4ನೇ ತರಗತಿ (ಅಂಗನವಾಡಿ ಸಹಾಯಕಿ) ಉತ್ತೀರ್ಣರಾಗಿರಬೇಕು.

ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆಯ ದಿನ :
ಅಂಗನವಾಡಿ ಕಾರ್ಯಕರ್ತೆ (Anganwadi Workers), ಮತ್ತು ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಮೇ. 2ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ :
ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್ https://anganwadirecruit.kar.nic.in/ ಗೆ ಭೇಟಿ ನೀಡಬಹುದು.

ಇನ್ನು ಆಸಿಡ್ ದಾಳಿಗೊಳಗಾದ ಮಹಿಳೆಯರು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದರೆ ಬೇರೆ ಯಾವುದೇ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳದೆ, ಅಂತವರಿಗೆ ಮೊದಲ ಅದ್ಯತೆ ನೀಡಿ ನೇರವಾಗಿ ಅವರನ್ನೇ ಆಯ್ಕೆ ಮಾಡಲಾಗುತ್ತದೆ.ಇಲಾಖೆಯ ಸಂಸ್ಥೆಗಳ ನಿವಾಸಿಗಳ ಆದ್ಯತೆ: ಬಾಲ ನ್ಯಾಯ ಕಾಯ್ದೆಯಡಿ ಇಲಾಖೆಯ ಸಂಸ್ಥೆಗಳಲ್ಲಿ / ರಾಜ್ಯ ಮಹಿಳಾ ನಿಲಯಗಳಲ್ಲಿ ಆಶ್ರಯ ಪಡೆದ ಹಾಲಿ /ಮಾಜಿ ನಿವಾಸಿಗಳಿಗೆ ಎರಡನೇ ಆದ್ಯತೆ ನೀಡಲಾಗುತ್ತದೆ. ವಿಧವೆಯರಿಗೆ ಆದ್ಯತೆ : ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ. ಬಳಿಕವಷ್ಟೇ ಇತರೆ ವಿಧವೆಯರನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಬಳಿಕ ವಿಧವೆಯಾದರೆ ಅಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ವಿಧವೆಯರು ತಾವು ಎಲ್ಲಿಯ ವಾಸಸ್ಥಳ ಧೃಡೀಕರಣ ಪತ್ರ ನೀಡುತ್ತಾರೋ ಅದೇ ಸ್ಥಳವನ್ನು ಅವರ ವಾಸಸ್ಥಳ ಎಂದು ಗಣನೆಗೆ ತೆಗದುಕೊಳ್ಳಲಾಗುವುದು. ವಿಧವಾ ಅಭ್ಯರ್ಥಿಯು ಗಂಡನ ಮರಣ ಪ್ರಮಾಣ ಪತ್ರ ನೀಡುವುದು ಕಡ್ಡಾಯವಾಗಿದೆ. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ವಿಧವೆಯರು ಅರ್ಜಿ ಸ್ವೀಕೃತವಾಗಿದ್ದರೆ ಗರಿಷ್ಟ ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಲ್ಲದಲೇ ಅಂಗವಿಕಲರಿಗೂ ನೇಮಕಾತಿಯಲ್ಲಿ ವಿನಾಯಿತಿಯನ್ನು ನೀಡಲಾಗಿದೆ.

ಇದನ್ನೂ ಓದಿ :  ನಿಮ್ಮ ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಆಗಿದೆಯಾ ? ಮೊಬೈಲ್‌ನಲ್ಲೇ ಚೆಕ್‌ ಮಾಡಿ

ಇದನ್ನೂ ಓದಿ : ಆಧಾರ್‌ ಕಾರ್ಡ್‌ ಜೊತೆ ಪ್ಯಾನ್ ಲಿಂಕ್‌ : ಮತ್ತೆ 3 ತಿಂಗಳ ಅವಕಾಶ, ತಪ್ಪಿದ್ರೆ ಬಾರೀ ದಂಡ

State Government Jobs Udupi Anganwadi Recruitment 2022 notification

Comments are closed.