ಗದಗ : ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯ ಸರ್ಕಾರವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ (Rural Development and Panchayat Raj University) ಸ್ನಾತಕೋತ್ತರ ಪದವಿ (Master’s Degree) ಪಡೆದವರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಸ್ನಾತಕೋತ್ತರ ಪದವಿ ಪಡೆದವರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಿಂದ ಪ್ರತಿವರ್ಷ 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೊರಬರುತ್ತಿದ್ದು, ಅಂತಹ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಅವಕಾಶ ಕಲ್ಪಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಸಮಿತಿ ನೀಡುವ ವರದಿ ಆಧರಿಸಿ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇದನ್ನೂ ಓದಿ: CHO 323 JOBS : ಸಮುದಾಯ ಆರೋಗ್ಯಾಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನ
(Good News from State Government: Government Jobs for Post Graduates)